ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 11ನೇ ದಿನದ ಕಾರ್ಯವನ್ನ ಸೋಮವಾರ ಮಾಡಲು ದೊಡ್ಮನೆ ಕುಟುಂಬ ನಿರ್ಧರಿಸಿದೆ. ಈ ಕಾರ್ಯಕ್ರಮದಲ್ಲಿ ಡಾ.ರಾಜ್ಕುಟುಂಬ ಮತ್ತು ಗಣ್ಯರು ಮಾತ್ರ ಭಾಗಿಯಾಗಲಿದ್ದಾರೆ.
ಇನ್ನು, 12ನೇ ದಿನದಂದು ಸಾರ್ವಜನಿಕರಿಗಾಗಿ ಪ್ಯಾಲೇಸ್ ಗ್ರೌಂಡ್ನಲ್ಲಿ ಡಾ.ರಾಜ್ ಕುಟುಂಬ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಪುಷ್ಪ ನಮನ ಸಲ್ಲಿಸುವುದರ ಜೊತೆಗೆ ಅಭಿಮಾನಿಗಳಿಗೆ ಅನ್ನದಾನ ಮಾಡಲಾಗುತ್ತೆ ಅನ್ನೋ ಮಾಹಿತಿ ಸಿಕ್ಕಿದೆ. ಅಕ್ಟೋಬರ್ 29ರಂದು ನಟ ಪುನೀತ್ ರಾಜ್ಕುಮಾರ್ ಹೃದಯಾಘಾತದಿಂದ ಸಾವನಪ್ಪಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post