ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಹಲವು ಕ್ರೀಡಾಪಟುಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ರು. ಈ ಬಾರಿ ಖೇಲ್ ರತ್ನ ಪ್ರಶಸ್ತಿಯನ್ನ ಒಟ್ಟು 12 ಸಾಧಕರಿಗೆ ನೀಡಲಾಗಿದೆ. ಇದರಲ್ಲಿ ಟೋಕಿಯೊ ಒಲಿಂಪಿಕ್ಸ್ನಲ್ಲಿ ಪದಕ ಗೆದ್ದ ಸಾಧಕರೂ ಇದ್ದಾರೆ.
ಖೇಲ್ ರತ್ನ ಪ್ರಶಸ್ತಿ: ನೀರಜ್ ಚೋಪ್ರಾ (ಜಾವೆಲಿನ್ ಎಸೆತದಲ್ಲಿ ಸ್ವರ್ಣ ಪದಕ), ಅವನಿ ಲೆಖರಾ (ಪ್ಯಾರಾ ಶೂಟಿಂಗ್), ಲವ್ಲಿನಾ ಬೊರ್ಗೊಹೈನ್ (ಬಾಕ್ಸಿಂಗ್), ರವಿ ಕುಮಾರ್ (ಕುಸ್ತಿಪಟು), ಶ್ರೀಜೇಶ್ ಪಿಆರ್, ಮನ್‌ಪ್ರೀತ್ ಸಿಂಗ್ (ಹಾಕಿ), ಕೃಷ್ಣ ನಗರ, ಪ್ರಮೋದ್ ಭಗತ್ (ಪ್ಯಾರಾ ಬ್ಯಾಡ್ಮಿಂಟನ್), ಸುಮಿತ್ ಆಂಟಿಲ್ (ಪ್ಯಾರಾ-ಅಥ್ಲೆಟಿಕ್ಸ್), ಮನೀಶ್ ನರ್ವಾಲ್ (ಪ್ಯಾರಾ ಶೂಟಿಂಗ್), ಮಿಥಾಲಿ ರಾಜ್ (ಕ್ರಿಕೆಟ್), ಸುನಿಲ್ ಛೆಟ್ರಿ (ಫುಟ್‌ಬಾಲ್)..
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post