ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಆಯಾ ರಾಜ್ಯಗಳ ಸರ್ಕಾರವೇ ಜವಾಬ್ದಾರಿ, ಈ ಬಗ್ಗೆ ತಮ್ಮದೇ ರಾಜ್ಯ ಸರ್ಕಾರಗಳನ್ನು ಪ್ರಶ್ನೆ ಮಾಡಿ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಇದೇ ವೇಳೆ ಜಿಎಸ್ಟಿ ಕೌನ್ಸಿಲ್ ದರ ನಿಗದಿಪಡಿಸುವವರೆಗೆ ಪೆಟ್ರೋಲ್ ಮತ್ತು ಡೀಸೆಲ್ನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ಸೇರಿಸಲಾಗುವುದಿಲ್ಲ. ನಮ್ಮ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದೆ. ಪೆಟ್ರೋಲ್ ಮತ್ತು ಡಿಸೇಲ್ ದರವನ್ನು ಮತ್ತಷ್ಟು ತಗ್ಗಿಸಲು VAT ಕಡಿಮೆ ಮಾಡುವಂತೆ ರಾಜ್ಯಗಳಿಗೆ ಮನವಿ ಮಾಡಲಾಗಿದೆ ಎಂದಿದ್ದಾರೆ.
ಕೇಂದ್ರ ಸರ್ಕಾರ ದೀಪಾವಳಿ ಹಿಂದಿನ ದಿನ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಸಿತ್ತು. ಕ್ರಮವಾಗಿ 5ರೂ ಮತ್ತು 10 ರೂ ನಷ್ಟು (ಪ್ರತಿ ಲೀಟರ್ಗೆ) ಕಡಿಮೆ ಮಾಡಿತ್ತು. ಅದರಂತೆ ಬಿಜೆಪಿ ಆಡಳಿತ ಇರುವ ಎಲ್ಲಾ ರಾಜ್ಯಗಳು ವ್ಯಾಟ್ ಕಡಿಮೆ ಮಾಡಿವೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post