ಹಾಸನ: ತರಗತಿ ವೇಳೆ ಕೊಠಡಿಯ ಮೇಲ್ಛಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಗರದ ಸಂತೇಪೇಟೆಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂಭವಿಸಿದೆ.
ಒಟ್ಟು 85 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವ ಶಾಲೆಯಲ್ಲಿ ಇಂದು ದಿಢೀರ್ನೆ ಮೇಲ್ಛಾವಣಿ ಕುಸಿದಿದೆ. ಪರಿಣಾಮ ಹತ್ತನೇ ತರಗತಿಯ ಸುಹಾನಾ, ಕುಲ್ಸುಮಾ, ಫಿಜಾ ಎಂಬ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು ತಕ್ಷಣವೇ ಅವರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಸ್ಥಳೀಯ ಶಾಸಕ ಪ್ರೀತಮ್ ಗೌಡ ಭೇಟಿ ನೀಡಿ ವೈದ್ಯರೊಂದಿಗೆ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿರುವುದಾಗಿ ನ್ಯೂಸ್ಫಸ್ಟ್ಗೆ ಮಾಹಿತಿ ಲಭ್ಯವಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post