ಎಂಎಲ್ಸಿ ಟಿಕೆಟ್ ಹಂಚಿಕೆಯಲ್ಲಿ ಸ್ವಜನ ಪಕ್ಷಪಾತಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಕಿಡಿಕಾರಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.
ಅತ್ತ ಬಿಜೆಪಿಯೂ ಕಾಂಗ್ರೆಸ್ನಿಂದ ಕುಟುಂಬ ರಾಜಕಾರಣ ಎಂಬ ವ್ಯಂಗ್ಯ ಮಾಡುತ್ತಿದೆ. ಇತ್ತ ಕಾಂಗ್ರೆಸ್ ಕಾರ್ಯಕರ್ತರಿಂದ ತಮ್ಮದೇ ಪಕ್ಷದಿಂದ ಕುಟುಂಬ ರಾಜಕಾರಣ ಎಂದು ಟೀಕೆ ವ್ಯಕ್ತವಾಗುತ್ತಿದೆ. ಪರಿಷತ್ ಟಿಕೆಟ್ ನೀಡೋ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ತಮ್ಮ ಕುಟುಂಬಸ್ಥರಿಗೆ ಮಣೆ ಹಾಕಿದ್ದಾರೆ ಎಂಬ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಕುಟುಂಬ ರಾಜಕಾರಣದ ಟೀಕೆಗೆ ಗುರಿಯಾದವರು ಇವರು. ಎಸ್. ರವಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸೋದರ ಸಂಬಂಧಿ. ಚನ್ನರಾಜ್ ಹಟ್ಟಿಹೊಳಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ. ಭೀಮರಾವ್ ಪಾಟೀಲ್ ಕಾಂಗ್ರೆಸ್ ಶಾಸಕ ರಾಜಶೇಖರ್ ಹುಮನಾಬಾದ್ ಸಹೋದರ. ಸುನೀಲ್ ಗೌಡ ಪಾಟೀಲ್ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಂ.ಬಿ. ಪಾಟೀಲ್ ಸಹೋದರ. ಹೀಗೆ ಕುಟುಂಬಸ್ಥರಿಗೇ ಟಿಕೆಟ್ ಕೊಟ್ಟಿರೋ ಕೈ ಪಕ್ಷದ ನಡೆ ಬಗ್ಗೆ ಬಿಜೆಪಿ ಮಾತ್ರವಲ್ಲ ಕಾಂಗ್ರೆಸ್ ಕಾರ್ಯಕರ್ತರು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ: ಪರಿಷತ್ ಚುನಾವಣೆ: ಕಾಂಗ್ರೆಸ್ ಶಾಸಕರಿಗೆ ಹೊಸ ಟಾಸ್ಕ್ ಕೊಟ್ಟ ಡಿ.ಕೆ ಶಿವಕುಮಾರ್
ಕಾಂಗ್ರೆಸ್ ಕಾರ್ಯಕರ್ತರು ತಮ್ಮದೇ ಪಕ್ಷದ ನಾಯಕರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಈಗ ಟ್ವಿಟರ್ನಲ್ಲಿ ಪ್ರಭಾಕರ್ ರೆಡ್ಡಿ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ NSUI ಮಾಜಿ ಅಧ್ಯಕ್ಷ ಪ್ರಭಾಕರ್ ರೆಡ್ಡಿ ನೇರವಾಗಿ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರಿಗೇ ಟ್ಯಾಗ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಪಕ್ಷದ ಪಡಸಾಲೆಯಲ್ಲೇ ಭಾರೀ ಚರ್ಚೆಗೆ ಗ್ರಾಸವಾಗಿದೆ ಕೈ ನಾಯಕರ ಕುಟುಂಬ ರಾಜಕೀಯ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post