ಸೂರ್ಯಕುಮಾರ್ ಯಾದವ್ ಮುಂಬೈ ತಂಡದ ಸ್ಪೋಟಕ ಬ್ಯಾಟ್ಸಮನ್. ಕೋಲ್ಕತಾ ನೈಟ್ ರೈಡರ್ಸ್ ತಂಡ ತೊರೆದ ಬಳಿಕ 2018ರಲ್ಲಿ ಮುಂಬೈ ಇಂಡಿಯನ್ಸ್ ಸೇರಿದ್ರು. 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸ್ತಾ ಇದ್ದ ಸೂರ್ಯ ಅದ್ಭುತ ನಿರ್ವಹಣೆ ತೋರಿದ್ದರು. ಆದರೀಗ, ಮುಂಬೈ ತಂಡವು ರೋಹಿತ್ ಶರ್ಮಾ, ಜಸ್‌ಪ್ರೀತ್ ಬುಮ್ರಾ, ಇಶಾನ್ ಕಿಶನ್ ಮತ್ತು ಕೈರೊನ್ ಪೊಲಾರ್ಡ್ ಅವರನ್ನು ಉಳಿಸಿಕೊಳ್ಳಲು ಮುಂದಾಗಿದೆ. ಹೀಗಾಗಿ ಸೂರ್ಯಕುಮಾರ್, ಹಾರ್ದಿಕ್ ಪಾಂಡ್ಯ, ಟ್ರೆಂಟ್ ಬೌಲ್ಟ್ ಮತ್ತು ಕೃನಾಲ್ ಪಾಂಡ್ಯ ತಂಡದಿಂದ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ.
ನೂತನ ಅಹ್ಮದಾಬಾದ್ ಫ್ರಾಂಚೈಸಿ ಮೆಗಾ ಆಕ್ಷನ್‌ಗೂ ಮೊದಲೇ ಸೂರ್ಯಕುಮಾರ್ ಯಾದವ್ ಜೊತೆಗೆ ದೊಡ್ಡ ಒಪ್ಪಂದ ಪಾಡಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಸ್ಪೋಟಕ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡದಿಂದ ಖಚಿತವಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post