ತುಮಕೂರು: ಪರಿಷತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಜೆಡಿಎಸ್ ಬೆಂಬಲ ಕೋರಿದೆ ಎಂದರೆ ಬಿಜೆಪಿ ವೀಕ್ ಆಗಿದೆ ಅಂತಲ್ಲ ಎಂದು ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಯಡಿಯೂರಪ್ಪ ಜೆಡಿಎಸ್ ಬೆಂಬಲ ಕೋರಿದ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಅಪಾಧ್ಯಕ್ಷ.. ಬೆಂಬಲ ಕೋರಿದೆ ಎಂದರೆ ಬಿಜೆಪಿ ವೀಕ್ ಆಗಿದೆ ಅಂತಲ್ಲ. ಹೆಚ್ಚಿನ ಅಂತರದಲ್ಲಿ ಗೆಲ್ಲಬೇಕು ಎಂಬ ಉದ್ದೇಶದಿಂದ ಬೆಂಬಲ ಕೋರಿದ್ದೇವೆ. ಯಡಿಯೂರಪ್ಪ ಬೆಂಬಲ ಕೋರಿದ್ದಾರೆ ಎಂದರೆ ಅದರ ಹಿಂದೆ ಒಳ್ಳೆ ಉದ್ದೇಶ ಇದೆ ಎಂದರ್ಥ ಎಂದಿದ್ದಾರೆ.
ಬಹುತೇಕ ಎಲ್ಲ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲುವಂತಹ ವಾತಾವರಣ ಸೃಷ್ಟಿಯಾಗಿದೆ. ಕನಿಷ್ಠ 15 ಕ್ಷೇತ್ರದಲ್ಲಾದರೂ ಬಿಜೆಪಿ ಗೆದ್ದೇ ಗೆಲ್ಲುತ್ತೇವೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ನಾನು ಬಿಜೆಪಿ ಉಪಾಧ್ಯಕ್ಷನಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ. ನಾನು ರಾಜಕೀಯ ಸನ್ಯಾಸಿ ಅಲ್ಲ. ರಾಜಕೀಯ ಕ್ಷೇತ್ರದಲ್ಲಿ ಕಾಲಿಟ್ಟಾಗಿನಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸಿದ್ದೇನೆ. ಎಲ್ಲಿ ಸ್ಪರ್ಧೆ ಮಾಡಬೇಕೆಂದು ಪಕ್ಷ ತೀರ್ಮಾನ ಮಾಡುತ್ತದೆ ಎಂದಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post