ನವದೆಹಲಿ: ದೇಶದಲ್ಲಿ ಕ್ರಿಪ್ಟೋಕರೆನ್ಸಿಯನ್ನು ಕಾನೂನುಬದ್ಧ ಟೆಂಡರ್ ಆಗಿ ಸ್ವೀಕರಿಸುವ ಯಾವುದೇ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಇತ್ತೀಚೆಗಿನ ದಿನಗಳಲ್ಲಿ ಭಾರತದಲ್ಲಿ ಬಿಟ್‌ಕಾಯಿನ್ ವಹಿವಾಟು ಸದ್ದಿಲ್ಲದೇ ಹೆಚ್ಚುತ್ತಿದೆ ಎಂದು ಲೋಕಸಭೆ ಕಲಾಪದಲ್ಲಿ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಲಿಖಿತ ರೂಪದಲ್ಲಿ ಉತ್ತರ ನೀಡಿರುವ ಕೇಂದ್ರ ಹಣಕಾಸು ಸಚಿವೆ, ಬಿಟ್ಕಾಯಿನ್ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ದಾಖಲೆಗಳು ನಮ್ಮ ಬಳಿ ಇಲ್ಲ ಎಂದು ತಿಳಿಸಿದ್ದಾರೆ.
ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಕ್ರಿಪ್ಟೋಕರೆನ್ಸಿ ಅಂಡ್ ರೆಗ್ಯೂಲೇಷನ್ ಆಫ್ ಆಫೀಷಲ್ ಡಿಜಿಟಲ್ ಕರೆನ್ಸಿ ಬಿಲ್-2021 ಪ್ರಸ್ತಾಪ ಮಾಡಲಿದೆ. ಕೆಲವು ವಿನಾಯತಿಗಳನ್ನ ಹೊರತುಪಡಿಸಿ ಎಲ್ಲಾ ಪ್ರೈವೇಟ್ ಕ್ರಿಪ್ಟೋಕರೆನ್ಸಿಯನ್ನ ದೇಶದಲ್ಲಿ ಬ್ಯಾನ್ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post