ನವದೆಹಲಿ: ಭಾರೀ ವಿವಾದಕ್ಕೆ ಕಾರಣವಾಗಿದ್ದ ಮೂರು ಕೃಷಿ ಕಾಯ್ದೆಗಳನ್ನ ಲೋಕಸಭೆಯಲ್ಲಿ ವಾಪಸ್ ಪಡೆಯಲಾಗಿದೆ. ಇಂದಿನಿಂದ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಈ ನಿರ್ಣಯಕ್ಕೆ ಬರಲಾಗಿದ್ದು. ಇನ್ನು ರಾಜ್ಯಸಭೆಯಲ್ಲಿ ಕೂಡ ಈ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ. ಆದರೆ ಭಾರತೀಯ ಕಿಸಾನ್ ಯುನಿಯನ್ ನಾಯಕ ರಾಕೇಶ್ ಟಿಕಾಯತ್ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ನೀತಿ ಜಾರಿ, ರೈತರ ಮೇಲೆ ಈ ಹಿಂದೆ ಹೇರಲಾಗಿರುವ ಹಲವಾರು ಕೇಸ್ಗಳ ರದ್ದು, ಮತ್ತು ಇಷ್ಟು ದಿನ ಈ ಸುದೀರ್ಘ ಹೋರಾಟದಲ್ಲಿ ಭಾಗವಹಿಸಿ ಹುತಾತ್ಮರಾದ ರೈತರ ಸ್ಮಾರಕಗಳನ್ನು ನಿರ್ಮಿಸಲು ಭರವಸೆ ನೀಡೋವರೆಗೆ ನಮ್ಮ ಹೋರಾಟ ಮತ್ತೇ ಮುಂದುವರೆಯಲಿದೆ ಎಂದಿದ್ದಾರೆ. ಅಷ್ಟೇ ಅಲ್ಲದೆ . ನಾಲ್ಕು ಲಕ್ಷ ಟ್ರಾಕ್ಟರ್ ಗಳನ್ನೊಳಗೊಂಡ ಮತ್ತೊಂದು ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಗಣರಾಜ್ಯೋತ್ಸವ ದಿನದಂದು ಎದುರಿಸಬೇಕು ಎಂದು ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:BIG BREAKING: ಲೋಕಸಭೆಯಲ್ಲಿ ವಿವಾದಿತ 3 ಕೃಷಿ ಕಾಯ್ದೆಗಳು ವಾಪಸ್
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post