ಆಸ್ಕರ್ ಪ್ರಶಸ್ತಿ ವಿಜೇತ ಎ. ಆರ್. ರೆಹಮಾನ್ಗೆ ಮತ್ತೊಂದು ಗೌರವ ಸಿಕ್ಕಿದೆ. ಸಂಗೀತ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ ಹಿನ್ನೆಲೆ, 43 ನೇ ಕೈರೋ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಿಶೇಷವಾಗಿ ಗೌರವಿಸಲಾಗಿದೆ. ಭಾರದತದ ಪ್ರಸಿದ್ಧ ಸಂಗೀತ ನಿರ್ದೇಶಕ ಎ. ಆರ್. ರೆಹಮಾನ್ ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ಹಾಲಿವುಡ್‌ನಲ್ಲಿ ಸಂಗೀತ ಸಂಯೋಜನೆ ಮಾಡಿ ಪ್ರಸಿದ್ಧಿ ಪಡೆದಿದ್ದಕ್ಕಾಗಿ, 43ನೇ ಕೈರೋ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಿಶೇಷವಾಗಿ ಸನ್ಮಾನಿಸಲಾಗಿದೆ. .
ಈ ವಿಚಾರವನ್ನು ರೆಹಮಾನ್ ತಮ್ಮ ಇನ್ಸ್ಟಾಗ್ರಂನಲ್ಲಿ ಹಂಚಿಕೊಂಡು ಸಂತಸ ವ್ಯಕ್ತ ಪಡಿಸಿದ್ದಾರೆ. ರೆಹಮಾನ್ ಇಲ್ಲಿವರೆಗೆ 2 ಆಸ್ಕರ್ ಅವಾರ್ಡ್, ಎರಡು ಗ್ರ್ಯಾಮಿ ಪ್ರಶಸ್ತಿಗಳನ್ನು ಮತ್ತು ಬೇರೆ ಬೇರೆ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇನ್ನು ರೆಹಮಾನ್ ಸಂಗೀತ ಜೀವನ ಪ್ರಾರಂಭವಾಗಿದ್ದು, ಮಣಿರತ್ನಂ ನಿರ್ದೇಶನದ ತಮಿಳು ಚಲನಚಿತ್ರ ‘ರೋಜಾ’ ಚಿತ್ರದಿಂದ.
ನಂತರ ತಮಿಳು ಮತ್ತು ತೆಲುಗು ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. 1995 ರಲ್ಲಿ ರಾಮ್ ಗೋಪಾಲ್ ವರ್ಮಾ ಅವರ ‘ರಂಗೀಲಾ’ ಚಿತ್ರದ ಮೂಲಕ ಬಾಲಿವುಡ್ಗೂ ಎಂಟ್ರಿ ಕೊಟ್ಟ ರೆಹಮಾನ್ ಅಲ್ಲಿಯೂ ತಮ್ಮ ಗೆಲುವಿನ ನಾಗಾಲೋಟವನ್ನು ಮುಂದುವರಿಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post