ನವದೆಹಲಿ: ಚರ್ಚೆಯಿಲ್ಲದೆ ಉಭಯ ಸದನಗಳಲ್ಲಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿ ಅಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಕೇಂದ್ರ ಸರ್ಕಾರ ವಿವಾದಿತ ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯಲಿದೆ ಎಂದು ಈ ಹಿಂದೆಯೇ ನಾನು ಹೇಳಿದ್ದೆ. ಅದೇ ರೀತಿ ಕಾಯ್ದೆಯನ್ನು ರದ್ದುಪಡಿಸಿದೆ. ಚರ್ಚೆ ನಡೆಸಲು ಸರ್ಕಾರಕ್ಕೆ ಭಯವಿದೆ. ರೈತರು ಪ್ರತಿನಿಧಿಸುವ ಭಾರತೀಯ ಜನರ ಬಲವನ್ನು ಎದುರಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎಂದಿದ್ದಾರೆ.
चर्चा नहीं होने दी-
MSP पर
शहीद अन्नदाता के लिए न्याय पर
लखीमपुर मामले में केंद्रीय मंत्री की बर्ख़ास्तगी पर…जो छीने संसद से चर्चा का अधिकार,
फ़ेल है, डरपोक है वो सरकार।— Rahul Gandhi (@RahulGandhi) November 29, 2021
ಭಾರೀ ವಿವಾದಕ್ಕೆ ಕಾರಣವಾಗಿದ್ದ ಮೂರು ಕೃಷಿ ಕಾಯ್ದೆಗಳನ್ನು ನಿನ್ನೆ ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ವಾಪಸ್ ಪಡೆಯಲಾಗಿದೆ. ಈ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ವ್ಯಕ್ತವಾಗಿದ್ದವು. ಹೀಗಾಗಿ ವಾಪಸ್ ಪಡೆಯುತ್ತಿರೋದಾಗಿ ಪ್ರಧಾನಿ ಮೋದಿ ಹೇಳಿದ್ದರು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post