ಬೆಂಗಳೂರು: ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಆರೋಪ ಕೇಳಿಬಂದಿದೆ. ಈ ವಿಚಾರದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ನ್ಯೂಸ್ಫಸ್ಟ್ಗೆ ಪ್ರತಿಕ್ರಿಯಿಸಿ.. ವಿಶ್ವನಾಥ್ ಹತ್ಯೆಗೆ ಸಂಚು ನಡೆದಿತ್ತು ಅನ್ನೋ ವಿಷಯ ಗೊತ್ತಾಗಿತ್ತು. ಈ ಸಂಬಂಧ ರಾತ್ರಿಯೇ ಅಧಿಕಾರಿಗಳು ಕೆಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.
ಹಿರಿಯ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ವಿಚಾರಣಾ ಹಂತದಲ್ಲಿ ಇದೆ, ಈಗಲೇ ಹೇಳಲು ಆಗಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ಎಸ್.ಆರ್.ವಿಶ್ವನಾಥ್ ಅವರ ಹತ್ಯೆಗೆ ಕಾಂಗ್ರೆಸ್ ನಾಯಕ ಗೋಪಾಲಕೃಷ್ಣ ಸಂಚು ರೂಪಿಸಿದ್ದರು ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಿಡಿಯೋ ಒಂದು ವೈರಲ್ ಆಗಿದ್ದು, ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post