ಇಂದಿನಿಂದ ಭಾರತ-ನ್ಯೂಜಿಲೆಂಡ್ 2ನೇ ಟೆಸ್ಟ್ ಆರಂಭವಾಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಟೆಸ್ಟ್ ಪಂದ್ಯ ನಡೆಯಲಿದೆ.
ಬೆಳಗ್ಗೆ 9.30ಕ್ಕೆ ಪಂದ್ಯ ಶುರುವಾಗಲಿದ್ದು, ಈಗಾಗಲೇ 2 ಟೆಸ್ಟ್ ಪಂದ್ಯಗಳ ಪೈಕಿ ಒಂದು ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯ ಕಂಡಿದೆ. ಆದ್ರೆ ಪಂದ್ಯದ ಆರಂಭದ ದಿನಕ್ಕೆ ಮಳೆರಾಯನ ಕಾಟ ಇರಲಿದೆ. ಕಳೆದ 2 ದಿನಗಳಿಂದ ಮುಂಬೈನಲ್ಲಿ ಧಾರಾಕಾರ ಮಳೆಯಾಗ್ತಿದ್ದು, ಇಂದು ಕೂಡ ಮಳೆ ಬರುವ ಸಾಧ್ಯತೆ ಇದೆ.
ಕಿವೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ಕಮ್ಬ್ಯಾಕ್ ಮಾಡಿದ್ದಾರೆ. ಮೊದಲ ಟೆಸ್ಟ್ ಪಂದ್ಯಕ್ಕೆ ವಿಶ್ರಾಂತಿ ಪಡೆದಿದ್ದ ಕೊಹ್ಲಿ 2ನೇ ಟೆಸ್ಟ್ ಪಂದ್ಯಕ್ಕೆ ಲಭ್ಯರಾಗ್ತಿದ್ದಾರೆ. ಆದ್ರೆ, ಕೊಹ್ಲಿ ಎಂಟ್ರಿಯಿಂದ ತಂಡದಲ್ಲಿ ಓರ್ವ ಆಟಗಾರನಿಗೆ ಕೊಕ್ ಬೀಳಲಿದೆ. ಮಯಾಂಕ್ ಅಗರ್ವಾಲ್ ಅಥವಾ ಶುಭ್ಮನ್ ಗಿಲ್ ಇವರಲ್ಲಿ ಓರ್ವನಿಗೆ ಕೊಕ್ ಕೊಡುವ ಸಾಧ್ಯತೆ ಇದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post