ಕನ್ನಡದ ಪವರ್ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಕನಸಿನ ಯೋಜನೆಯಾದ ‘ಗಂಧದ ಗುಡಿ’ಯ ಟೀಸರ್ ಬಿಡುಗಡೆಯಾಗಿದೆ. ‘ಗಂಧದಗುಡಿ’ ಡಾಕ್ಯುಮೆಂಟರಿಯನ್ನು ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ತಮ್ಮ ಪಿಆರ್ಕೆ ಆಡಿಯೋನಲ್ಲಿ ಬಿಡುಗಡೆ ಮಾಡಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಅದ್ಭುತ ದೃಶ್ಯಕಾವ್ಯದ ಸಂದೇಶ ಎಲ್ಲರಿಗೂ ತಲುಪಬೇಕು ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಅವರು ನಮ್ಮೆಲ್ಲರ ಪ್ರೀತಿಯ ಅಪ್ಪು ಪುನೀತ್ ರಾಜಕುಮಾರ್ ಅಭಿನಯದ ಪಿ.ಆರ್.ಕೆ ಪ್ರೊಡಕ್ಷನ್ ನಿರ್ಮಿಸಿರುವ ‘ಗಂಧದ ಗುಡಿ’ ಒಂದು ಅದ್ಭುತ ಕಲಾಕೃತಿ. ನಾಡಿನ ಪ್ರಾಕೃತಿಕ ಶ್ರೀಮಂತಿಕೆ, ಜೀವಸಂಕುಲ, ಬುಡಕಟ್ಟು ಜನರ ಸಂಸ್ಕೃತಿಗಳನ್ನು ಪರಿಚಯಿಸುವ ಮೂಲಕ, ವಿಶಿಷ್ಟ ರೀತಿಯಲ್ಲಿ ಕಥೆಯೊಂದನ್ನು ಹೇಳುತ್ತಿದೆ.
ಇದನ್ನೂ ಓದಿ:ಅಪ್ಪು ಕನಸಿನ ‘ಗಂಧದಗುಡಿ’ ಟೀಸರ್ ರಿಲೀಸ್ -ವಿಡಿಯೋ
ಈ ಅದ್ಭುತ ದೃಶ್ಯಕಾವ್ಯದ ಸಂದೇಶ ಎಲ್ಲರಿಗೂ ತಲುಪಬೇಕು. ಪ್ರತಿ ಭಾರತೀಯ, ಅದರಲ್ಲೂ ವಿಶೇಷವಾಗಿ ಪ್ರತಿಯೊಬ್ಬ ಕನ್ನಡಿಗ ಕರುನಾಡಿನ ಈ ಕಥಾನಕವನ್ನು ನೋಡುವಂತಾಗಲಿ. ನಮ್ಮ ಅರಣ್ಯ, ನಮ್ಮ ಪರಿಸರ, ವೈವಿಧ್ಯಮಯ ಪ್ರಾಕೃತಿಕ ಸಂಪತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಚಿತ್ರ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಈ ಅದ್ಭುತ ದೃಶ್ಯಕಾವ್ಯದ ಸಂದೇಶ ಎಲ್ಲರಿಗೂ ತಲುಪಬೇಕು. ಪ್ರತಿ ಭಾರತೀಯ, ಅದರಲ್ಲೂ ವಿಶೇಷವಾಗಿ ಪ್ರತಿಯೊಬ್ಬ ಕನ್ನಡಿಗ ಕರುನಾಡಿನ ಈ ಕಥಾನಕವನ್ನು ನೋಡುವಂತಾಗಲಿ. ನಮ್ಮ ಅರಣ್ಯ, ನಮ್ಮ ಪರಿಸರ, ವೈವಿಧ್ಯಮಯ ಪ್ರಾಕೃತಿಕ ಸಂಪತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಚಿತ್ರ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆ. 2/2https://t.co/Tb4cF5LJkW
— Basavaraj S Bommai (@BSBommai) December 6, 2021
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post