ಬೆಂಗಳೂರು: ಒಮಿಕ್ರಾನ್ ಆತಂಕದ ನಡುವೆಯೇ ಜರ್ಮನಿಯಿಂದ ಇಂದು ಬೆಳಗ್ಗೆ ಬೆಂಗಳೂರಿಗೆ ಬಂದ ಇಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಜರ್ಮನಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆಯೇ ತಪಾಸಣೆಗೆ ಒಳಪಡಿಸಿದಾಗ ಪಾಸಿಟಿವ್ ಇರೋದು ದೃಢಪಟ್ಟಿದೆ.
ಇಂದು ಬೆಳಗ್ಗಿನ ಜಾವ 3 ಗಂಟೆಗೆ ಜರ್ಮನಿಯಿಂದ ಬಂದ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಯಿತು. ಈ ವೇಳೆ ಇಬ್ಬರಿಗೆ ಸೊಂಕು ಇರೋದು ದೃಢವಾಗಿದೆ. ಓರ್ವ ಸೋಂಕಿತನನ್ನ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಐಸೋಲೇಷನ್ಗೆ ಕಳುಹಿಸಲಾಗಿದೆ. ಇನ್ನು ಮತ್ತೊಬ್ಬ ಸೋಂಕಿತ ಏರ್ಪೋರ್ಟ್ನಿಂದ ಅಧಿಕಾರಿಗಳ ಕಣ್ಣು ತಪ್ಪಿಸಿಕೊಂಡು ನಾಪತ್ತೆ ಆಗಿದ್ದಾನೆ ಅನ್ನೋ ಮಾಹಿತಿ ತಿಳಿದುಬಂದಿದೆ.
ಸೋಂಕಿತನ ನಾಪತ್ತೆಯಿಂದ ಏರ್ಪೋರ್ಟ್ನಲ್ಲಿ ಆತಂಕ ಹೆಚ್ಚಾಗಿದೆ. ವಿಮಾನ ನಿಲ್ದಾಣದ ಆರೋಗ್ಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅಚಾತುರ್ಯ ನಡೆದಿದೆ ಎನ್ನಲಾಗಿದೆ. ಸದ್ಯ ಸೋಂಕಿತನ ಪತ್ತೆಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post