ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಮಾಡ್ತಿದೆ. ಕೊರೊನಾ ಸಂದರ್ಭದಲ್ಲಿ ಪಾದಯಾತ್ರೆ ಮಾಡ್ತಿರೋದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ನಿನ್ನೆ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿ, ರಾಜ್ಯ ಕಾಂಗ್ರೆಸ್ ಘಟಕಕ್ಕೆ ತರಾಟೆ ತೆಗೆದುಕೊಂಡಿದೆ. ಇದರ ಬೆನ್ನಲ್ಲೇ ಬಿಜೆಪಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಪಾದಯಾತ್ರೆಯನ್ನ ಕೈಬಿಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಡಿಕೆಎಸ್ಗೆ ದೂರವಾಣಿ ಕರೆ ಮಾಡಿ ಮಾತನಾಡಿರುವ ಎಸ್ಎಂಕೆ, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಏರಿಕೆ ಆಗುತ್ತಿದೆ. ಪಾದಯಾತ್ರೆಯನ್ನ ಈ ಸಂದರ್ಭದಲ್ಲಿ ಮಾಡುವುದು ಸರಿಯಲ್ಲ. ತಕ್ಷಣವೇ ಪಾದಯಾತ್ರೆ ಕೈಬಿಡಿ ಎಂದು ಎಸ್.ಎಂ.ಕೃಷ್ಣ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸೋಂಕು ವ್ಯಾಪಕವಾಗಿ ಹರಡಲಾರಂಭಿಸಿದೆ. ಇಂತಹ ಸಂದರ್ಭದಲ್ಲಿ ನೀವು ನೂರಾರು ಮಂದಿ ಕಾರ್ಯಕರ್ತರನ್ನು ಕರೆದುಕೊಂಡು ಪಾದಯಾತ್ರೆ ಮಾಡಿದ್ರೆ ಸಂದೇಶ ಏನು ಹೋಗುತ್ತದೆ? ಸೋಂಕು ದೊಡ್ಡ ಪ್ರಮಾಣದಲ್ಲಿ ಹರಡಿದ್ರೆ, ಅದಕ್ಕೆ ನೀವೇ ಜವಾಬ್ದಾರರಾಗುತ್ತೀರಿ. ಹೀಗಾಗಿ, ತಕ್ಷಣವೇ ಪಾದಯಾತ್ರೆ ಕೈಬಿಡಿ ಎಂದು ಡಿ.ಕೆ.ಶಿವಕುಮಾರ್‌ಗೆ ಎಸ್.ಎಂ ಕೃಷ್ಣ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post