ಭಾರತ ತಂಡದ ಫೀಲ್ಡಿಂಗ್ ಸಂದರ್ಭದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶೇಷ ಮೈಲಿಗಲ್ಲೊಂದನ್ನು ಸಾಧಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಶತಕವನ್ನು ಗಳಿಸಲು ವಿಫಲವಾಗಿದ್ದರೂ ಫೀಲ್ಡಿಂಗ್‌ನಲ್ಲಿ ಕೊಹ್ಲಿ ಶತಕದ ಸಾಧನೆಯೊಂದನ್ನು ಮಾಡಿ ಮಿಂಚಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಫೀಲ್ಡಿಂಗ್ ವೇಳೆ ವಿರಾಟ್ ಕೊಹ್ಲಿ 100 ಕ್ಯಾಚ್ ಪಡೆದು ವಿಶೇಷ ಮೈಲಿಗಲ್ಲನ್ನು ಸಾಧಿಸಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್ ಟೌನ್ನಲ್ಲಿ ಟೆಸ್ಟ್ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯ ನಡೆಯುತ್ತಿದೆ. ಎರಡನೇ ದಿನದ ಆಟದಲ್ಲಿ ವಿರಾಟ್ ಕೊಹ್ಲಿ ಟೆಂಬಾ ಬವಮಾ ಅವರ ಕ್ಯಾಚ್ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ.
View this post on Instagram
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post