ಬೆಂಗಳೂರು: ಲಾಕ್ಡೌನ್ ಮೂಲಕ ಕೊರೊನಾ ನಿಯಂತ್ರಿಸುವುದು ಸರಿಯಲ್ಲ ಎಂದು ನಗರದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು.. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ಡೌನ್ ಇಲ್ಲ. ಲಾಕ್ಡೌನ್ನಿಂದ ಕೊರೊನಾ ನಿಯಂತ್ರಿಸಲು ಆಗಲ್ಲ. ಒಮಿಕ್ರಾನ್ ತಡೆಗೆ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದ್ದೇವೆ. ಅಧಿಕಾರಿಗಳೊಂದಿಗೆ ನಿತ್ಯವೂ ಸಭೆ ನಡೆಸುತ್ತಿರುವೆ ಎಂದಿದ್ದಾರೆ.
ಸೋಂಕು ಹೆಚ್ಚುತ್ತಿರುವ ಜಿಲ್ಲೆಗಳ ಡಿಸಿಗಳ ಜೊತೆ ಸಭೆ ಮಾಡಲಾಗುತ್ತಿದೆ. ಒಂದೇ ವಾರದಲ್ಲಿ ಸೋಂಕು ಕಡಿಮೆಯಾಗಲ್ಲ. ಒಮಿಕ್ರಾನ್ 5-6 ಪಟ್ಟು ವೇಗವಾಗಿ ಹರಡುತ್ತಿದೆ. ಫೆಬ್ರವರಿ ಮೊದಲ ವಾರ ಒಮಿಕ್ರಾನ್ ಹೆಚ್ಚಾಗಬಹುದು. ಫೆಬ್ರವರಿ 3-4ನೇ ವಾರದವರೆಗೆ ಎಚ್ಚರಿಕೆಯಿಂದಿರಬೇಕು ಎಂದಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post