ಬೆಳಗಾವಿ: ಜಿಲ್ಲೆಯಲ್ಲಿ ಕಳೆದ 10 ವರ್ಷಗಳಲ್ಲಿಯೇ ಮೊದಲ ಬಾರಿಗೆ ಕುಂದಾನಗರಿಯಲ್ಲಿ ಕಡಿಮೆ ತಾಪಮಾನ ದಾಖಲಾಗಿದೆ. ಕಳೆದ ಎರಡು ದಿನಗಳಿಂದ 10 ಡಿಗ್ರಿ ಸೆಲ್ಸಿಯಸ್ಗೆ ಇಳಿಕೆ ಕಂಡಿರುವ ತಾಪಮಾನದಿಂದ ಜನ ತತ್ತರಿಸಿ ಹೋಗಿದ್ದಾರೆ.
ಮಧ್ಯರಾತ್ರಿಯಿಂದ ಬೆಳಗಿನ ಜಾವ 8ಗಂಟೆಯ ವರೆಗೆ ವಿಪರೀತ ಚಳಿ ಹಾಗೂ ಬೆಳಗ್ಗೆ, ರಾತ್ರಿ ದಟ್ಟವಾದ ಮಂಜು ಕವಿದ ವಾತಾವರಣ ಸೃಷ್ಟಿಯಾಗುತ್ತಿದೆ. ಹವಾಮಾನದಲ್ಲಿ ದಿಢೀರ್ ಬದಲಾವಣೆಯಿಂದ ಜನರಲ್ಲಿ ನೆಗಡಿ, ಕೆಮ್ಮು, ಜ್ವರ ಹೆಚ್ಚಾಗಿದೆ.
ಈ ಸಂಬಂಧವಾಗಿ ಎಚ್ಚರಿಕೆ ನೀಡಿರುವ ಹವಾಮಾನ ಇಲಾಖೆ ಇನ್ನಷ್ಟು ತಾಪಮಾನ ಇಳಿಮುಖವಾಗುವ ಬಗ್ಗೆ ಮಾಹಿತಿ ನೀಡಿದೆ. ಕೊರೊನಾ ಸಂದರ್ಭದಲ್ಲಿ ಪ್ರತಿಕೂಲ ವಾತಾವರಣದಿಂದ ಜನ ಹೈರಾಣಾಗಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post