ನಿನ್ನೆ ಅಂತ್ಯವಾಗಿದ್ದ ನ್ಯೂಜಿಲೆಂಡ್ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿತ್ತು. ದಕ್ಷಿಣ ಆಫ್ರಿಕಾ ತಂಡ 2-1 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿತ್ತು. ಈ ನಡುವೆ ಮಹತ್ವದ ನಿರ್ಧಾರ ಪ್ರಕಟಿಸಿರೋ ವಿರಾಟ್ ಕೊಹ್ಲಿ, ನಾಯಕತ್ವ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.
ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಟೀಂ ಇಂಡಿಯಾ ಆಸ್ಟ್ರೇಲಿಯಾ, ಇಂಗ್ಲೆಂಡ್ನಲ್ಲಿ ಅದ್ಭುತ ಪ್ರದಶನ ತೋರಿತ್ತು. ಅಲ್ಲದೇ ದಕ್ಷಿಣ ಆಫ್ರಿಕಾ ತಂಡ ಹಿರಿಯ ಆಟಗಾರರ ಗೈರಿನಲ್ಲಿ ವೀಕ್ ಆಗಿ ಕಂಡು ಬಂದಿತ್ತು. ಹಲವು ಕ್ರಿಕೆಟ್ ವಿಶ್ಲೇಷಕರು ಟೀಂ ಇಂಡಿಯಾ, ಸೌತ್ ಆಫ್ರಿಕಾ ನೆಲದಲ್ಲಿ ಮೊದಲ ಟೆಸ್ಟ್ ಸರಣಿ ಗೆಲುವು ಪಡೆಯಲು ಇದು ಮಹತ್ವದ ಅವಕಾಶ ಎಂದೇ ವಿಶ್ಲೇಷಣೆ ಮಾಡಿದ್ದರು. ಆದರೆ ಮೊದಲ ಪಂದ್ಯದಲ್ಲಿ ಗೆಲುವು ಪಡೆದಿದ್ದ ಟೀಂ ಇಂಡಿಯಾ ಆ ಬಳಿಕ ಎರಡೂ ಪಂದ್ಯದಲ್ಲೂ ಸೋಲುಂಡು ನಿರಾಸೆ ಅನುಭವಿಸಿತ್ತು. ಇದರೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲೂ ಕೊಹ್ಲಿ ನಾಯಕತ್ವ ಬಗ್ಗೆ ವಿಮರ್ಶೆಗಳು ಕೇಳಿ ಬಂದಿದ್ದವು. ಈ ಬೆನ್ನಲ್ಲೇ ನಾಯಕತ್ವದಿಂದ ಕೆಳಗಿಳಿಯೋದಾಗಿ ಘೋಷಣೆ ಮಾಡಿರುವ ಕೊಹ್ಲಿ, ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ತಮ್ಮ 7 ವರ್ಷದ ನಾಯಕತ್ವದ ಪ್ರಯಾಣದಲ್ಲಿ ಸಹಕಾರ ನೀಡಿದ ಬಿಸಿಸಿಐ ಹಾಗೂ ತಂಡ ಸಹ ಆಟಗಾರರಿಗೆ ಕೊಹ್ಲಿ ಧನ್ಯವಾದ ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಬೆನ್ನಲ್ಲೇ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇನ್ನು ಏಕದಿನ ಹಾಗೂ ಟಿ-20 ಮಾದರಿಯ ನಾಯಕತ್ವದಿಂದ ಕೆಳಗಿಳಿದ ವಿಚಾರದಲ್ಲಿ ಕೊಹ್ಲಿ, ಬಿಸಿಸಿಐ ಬಾಸ್ಗಳೊಂದಿಗೆ ಮನಸ್ತಾಪ ಕೂಡ ಏರ್ಪಟ್ಟಿತ್ತು.
— Virat Kohli (@imVkohli) January 15, 2022
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post