ಮೊನ್ನೆ ಅಂತ್ಯವಾಗಿದ್ದ ನ್ಯೂಜಿಲೆಂಡ್ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿತ್ತು. ದಕ್ಷಿಣ ಆಫ್ರಿಕಾ ತಂಡ 2-1 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿತ್ತು. ಈ ನಡುವೆ ಮಹತ್ವದ ನಿರ್ಧಾರ ಪ್ರಕಟಿಸಿರೋ ವಿರಾಟ್ ಕೊಹ್ಲಿ, ನಾಯಕತ್ವ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.
ನಿನ್ನೆ ವಿರಾಟ್ ತಮ್ಮ ಟೆಸ್ಟ್ ತಂಡದ ನಾಯಕತ್ವ ಸ್ಥಾನದಿಂದ ಕೆಳಗಿಳಿಯುವ ಮೊದಲು ರಾಹುಲ್ ದ್ರಾವಿಡ್ ಅವರಿಗೆ ತಿಳಿಸಿದ್ದರು ಎನ್ನಲಾಗಿದೆ. ಹೌದು ವಿರಾಟ್ ಕೊಹ್ಲಿ ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸೋ ಮುನ್ನ ಟೀಂ ಇಂಡಿಯಾದ ಹಾಲಿ ಕೋಚ್ ದ್ರಾವಿಡ್ ಅವರಿಗೆ ತಿಳಿಸಿದ್ದಾರೆ. ನಂತರ ಬಿಸಿಸಿಐ ನ ಕಾರ್ಯದರ್ಶಿ ಜಯ್ ಶಾ ಅವರಿಗೆ ಕರೆ ಮಾಡಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಕೊಹ್ಲಿ ಪಾಲಿಗೆ ಅತ್ಯಂತ ಪ್ರತಿಷ್ಠೆಯಾಗಿತ್ತು. ಆದರೆ ಸರಣಿಯ ಮೊದಲ ಪಂದ್ಯದಲ್ಲಿ ಗೆದ್ದ ಭಾರತ, ನಂತರ ಉಳಿದ ಎರಡು ಟೆಸ್ಟ್ಗಳಲ್ಲೂ ಮುಗ್ಗರಿಸಿ ಸರಣಿಯಲ್ಲಿ ಸೋಲು ಕಂಡಿತ್ತು. ಹೀಗಾಗಿ ಹರಿಣಗಳ ನಾಡಲ್ಲಿ 30 ವರ್ಷಗಳಿಂದ ಟೆಸ್ಟ್ ಸರಣಿ ಗೆಲ್ಲುವ ಭಾರತದ ಕನಸು ಕನಸಾಗಿಯೇ ಉಳಿದುಕೊಂಡಿತು. ಹೀಗಾಗಿ ಪ್ರತಿಷ್ಠೆಯ ಸರಣಿಯನ್ನ ಗೆಲ್ಲಲಿಲ್ಲವೆಂಬ ಕಾರಣಕ್ಕೂ ವಿರಾಟ್ ನಾಯಕತ್ವ ತ್ಯಜಿಸಿರುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post