ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ಶ್ರೀಜಾ ತಮ್ಮ ಇನ್ಸ್ಟಾಗ್ರಾಂ ಖಾತೆಯ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಈ ಹಿಂದೆ ಟಾಲಿವುಡ್ ನಟಿ ಸಮಂತಾ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಅವರ ಹೆಸರಿನ ಮುಂದಿದ್ದ ಅಕ್ಕಿನೇನಿ ಹೆಸರು ತೆಗೆದುಹಾಕಿದ್ದಾಗ ಸಮಂತಾ ಹಾಗೂ ನಾಗಚೈತನ್ಯ ಸಂಸಾರದಲ್ಲಿ ಬಿರುಕು ಮೂಡಿದೆ. ಹೀಗಾಗಿ ಸಮಂತಾ, ಅಕ್ಕಿನೇನಿ ಹೆಸರನ್ನು ತೆಗೆದುಹಾಕಿದ್ದಾರೆ ಎಂಬ ವದಂತಿ ಟಾಲಿವುಡ್ ಅಂಗಳದಲ್ಲಿ ಸಖತ್ ಸೌಂಡ್ ಮಾಡಿತ್ತು. ಆದರೆ ಈ ಘಟನ ನಡೆದ ಕೆಲ ದಿನಗಳ ನಂತರ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ ಪಡೆದು ತಮ್ಮ ಸಾಂಸಾರಿಕ ಜೀವನಕ್ಕೆ ಗುಡ್ ಬೈ ಹೇಳಿದ್ದರು.
ಇನ್ನು ನಿನ್ನೆಯಷ್ಟೇ ಕಾಲಿವುಡ್ ಸೂಪರ್ಸ್ಟಾರ್ ರಜನಿ ಕಾಂತ್ ಪುತ್ರಿ ಐಶ್ವರ್ಯ ಹಾಗೂ ನಟ ಧನುಷ್ ತಮ್ಮ ಸಂಸಾರಿಕ ಬದುಕಿಗೆ ದಿಢೀರ್ ವಿದಾಯ ಹೇಳುವ ಮೂಲಕ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಇದೀಗ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ಶ್ರೀಜಾ ಕೂಡ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಅವರ ಹೆಸರಿನ ಮುಂದಿದ್ದ ತಮ್ಮ ಪತಿಯ ಹೆಸರನ್ನು ತೆಗೆದುಹಾಕಿದ್ದಾರೆ. ಈ ಹಿಂದೆ ಶ್ರೀಜಾ ಕಲ್ಯಾಣ್ ಎಂದಿದ್ದ ತಮ್ಮ ಹೆಸರನ್ನು ಶ್ರೀಜಾ ಕೊನಿಡೇಲ ಅಂತ ಬದಲಾಯಿಸಿಕೊಂಡಿದ್ದಾರೆ. ಹೀಗಾಗಿ ಶ್ರೀಜಾ ಹಾಗೂ ನಟ ಕಲ್ಯಾಣ್ ದೇವ್ ಸಾಂಸಾರಿಕ ಜೀವನದಲ್ಲಿ ಬಿರುಕು ಮೂಡಿದ್ದು ಇಬ್ಬರೂ ಶ್ರೀಘದಲ್ಲಿಯೇ ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ.
ಶ್ರೀಜಾ ಹಾಗೂ ಕಲ್ಯಾಣ್ ದೇವ್ 2016 ಮಾರ್ಚ್ 28 ರಂದು ತಮ್ಮ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ನಾವಿಷ್ಕಾ ಎಂಬ ಹೆಣ್ಣು ಮಗುವಿದೆ. ಕಲ್ಯಾಣ್ ದೇವ್ ಅವರನ್ನು ವಿವಾಹವಾಗುವ ಮುನ್ನ ಶ್ರೀಜಾ 2007 ರಲ್ಲಿ ಸಿರಿಶ್ ಭಾರದ್ವಾಜ್ ಎಂಬುವವರನ್ನು ಮದುವೆಯಾಗಿದ್ದರು. 2009 ರಲ್ಲಿ ಈ ದಂಪತಿಗೆ ನಿವೃತಿ ಎಂಬ ಹೆಣ್ಣು ಮಗು ಹುಟ್ಟಿತ್ತು. ಆದರೆ 2011ರಲ್ಲಿ ಶ್ರೀಜಾ, ಭಾರಧ್ವಾಜ್ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ದಾಖಲಿಸಿ ಡಿವೋರ್ಸ್ ಪಡೆದು ತಮ್ಮ ಬಾಲ್ಯದ ಗೆಳೆಯ ಕಲ್ಯಾಣ್ ದೇವ್ ಅವರನ್ನು ವಿವಾಹವಾಗಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post