ಟಾಲಿವುಡ್ ಐಕಾನಿಕ್ ಸ್ಟಾರ್ ಅಲ್ಲು ಅರ್ಜುನ್ ಅವರು ‘ಪುಷ್ಪ-1’ ಸಿನಿಮಾ ನಂತರ ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದು ನಿಂತಿದ್ದಾರೆ. ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ-1’ ಚಿತ್ರ ಬ್ಲಾಕ್ಬಸ್ಟರ್ ಹಿಟ್ ಆಗಿದ್ದು, ವಲ್ಡ್ ವೈಡ್ ಬಾಕ್ಸಾಫೀಸ್ನಲ್ಲಿ ಬರೋಬ್ಬರಿ 350ಕ್ಕೂ ಹೆಚ್ಚು ಕೋಟಿ ರೂಪಾಯಿ ಬಾಚಿಕೊಂಡಿದೆ. ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಸಿನಿ ಕರಿಯರ್ಗೆ ಈ ಚಿತ್ರ ದೊಡ್ಡಮಟ್ಟದ ಯಶಸ್ಸನ್ನು ತಂದುಕೊಟ್ಟಿದ್ದು, ಇವರ ಫ್ಯಾನ್ ಫಾಲೋವರ್ಸ್ ಸಂಖ್ಯೆ ಕೂಡ ಹೆಚ್ಚಾಗಿದೆ.
‘ಪುಷ್ಪ-1’ ಬಿಗ್ ಸಕ್ಸಸ್ ನಂತರ ಅಲ್ಲು ಅರ್ಜುನ್ ತಮ್ಮ ಸಂಭಾವನೆಯನ್ನು ಭಾರಿ ಮೊತ್ತಕ್ಕೆ ಹೆಚ್ಚಿಸಿಕೊಂಡಿದ್ದಾರೆ ಎಂಬ ಮಾತು ಟಾಲಿವುಡ್ ಅಂಗಳದಲ್ಲಿ ಕೇಳಿಬಂದಿದೆ. ಪುಷ್ಪ ಸಿನಿಮಾಗೂ ಮುನ್ನ ರಿಲೀಸ್ ಆದ ‘ಅಲ ವೈಕುಂಠಪುರಮುಲೋ’ ಸಿನಿಮಾದಲ್ಲಿ ನಟಿಸಲು ಅಲ್ಲು ಅರ್ಜುನ್ 20 ರಿಂದ 25 ಕೋಟಿ ಸಂಭಾವನೆಯನ್ನು ಪಡೆದಿದ್ದರಂತೆ.
‘ಅಲ ವೈಕುಂಠಪುರಮುಲೋ’ ಸಿನಿಮಾದ ಸಕ್ಸಸ್ ನಂತರ ಪುಷ್ಪ ಸಿನಿಮಾದಲ್ಲಿ ಅಭಿನಯಿಸಲು ಅಲ್ಲು ಅರ್ಜುನ್ 32 ಕೋಟಿ ರೂಪಾಯಿ ಸಂಭಾವನೆಯನ್ನು ಪಡೆದಿದ್ದರು. ಸದ್ಯ ಪುಷ್ಪ ಚಿತ್ರ ಕೂಡ ಸೂಪರ್ ಹಿಟ್ ಆಗಿದ್ದು, ಅಲ್ಲು ಅರ್ಜುನ್ ತಮ್ಮ ಸಂಭಾವನೆ ಮತ್ತಷ್ಟು ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post