ನೆರೆಯ ಪಾಕಿಸ್ತಾನದ ಲಾಹೋರ್ನಲ್ಲಿ ಭೀಕರ ಬಾಂಬ್ ಸ್ಫೋಟಗೊಂಡಿದೆ. ಲಾಹೋರ್ನ ಅನಾರ್ಕಲಿ ಮಾರುಕಟ್ಟೆ ಪ್ರಾಂಗಣದಲ್ಲಿ ಈ ಸ್ಫೋಟ ಸಂಭವಿಸಿದ್ದು, ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ. 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ ಅಂತಾ ಲಾಹೋರ್ ಪೊಲೀಸರು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ ಅಂತಾ ಡಾನ್ ಪತ್ರಿಕೆ ವರದಿ ಮಾಡಿದೆ.
ಭಾರತದ ಅತ್ತಾರಿ ಬಾರ್ಡರ್ನಿಮದ ಕೇವಲ 28 ಕಿಮೀ ಅಂತರದಲ್ಲಿ ಈ ದುರಂತ ಸಂಭವಿಸಿದ್ದು ಸಾಕಷ್ಟು ಆತಂಕ ಉಂಟು ಮಾಡಿದೆ. ಸುಧಾರಿತ ಸ್ಫೊಟಕ ಸಾಧನ (IED) ಬಳಸಿ ಈ ಕೃತ್ಯವನ್ನು ಎಸಗಲಾಗಿದೆ ಎನ್ನಲಾಗ್ತಿದ್ದು, ಸ್ಫೋಟದ ತೀವ್ರತೆಗೆ ಸುತ್ತಲಿನ ಮನೆ, ಕಟ್ಟಡಗಳಿಗೆ ಹಾನಿಯಾಗಿದೆ ಎಂದು ವರದಿಗಳಾಗಿವೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post