ಬೆಂಗಳೂರು: ನಗರದ ಮಕ್ಕಳ ಕೂಟ ಸರ್ಕಲ್ ಬಳಿ KA57F 1592 ನಂಬರಿನ ಬಿಎಂಟಿಸಿ ಬಸ್ ಹೊತ್ತಿ ಉರಿದಿದೆ. ಬೆಂಕಿ ಹೊತ್ತಿಕೊಳ್ತಿದ್ದಂತೆ ಚಾಲಕ ಬಸ್ ನಿಲ್ಲಿಸಿದ್ದಾನೆ, ಪರಿಣಾಮ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ವರದಿಯಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಲ್ಲದೇ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಬಸ್ ಕೆ.ಆರ್.ಮಾರುಕಟ್ಟೆಯಿಂದ ವಿವಿಪುರಂ ಮಾರ್ಗವಾಗಿ ಮಕ್ಕಳಕೂಟ ಬಸ್ ನಿಲ್ದಾಣಕ್ಕೆ ಬರುತ್ತಿತ್ತು ಎನ್ನಲಾಗಿದೆ. ಬಸ್ಸಿನಲ್ಲಿ ಸುಮಾರು 40 ಪ್ರಯಾಣಿಕರು ಇದ್ದರು ಎನ್ನಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post