ಟಾಲಿವುಡ್ ನಟ ವಿಜಯ್ ದೇವರಕೊಂಡ ತಮ್ಮ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ಪುಷ್ಪ ಸಿನಿಮಾದ ಸಕ್ಸಸ್ ಬಳಿಕ ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್ ತಮ್ಮ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗಿತ್ತು. ಇದೀಗ ವಿಜಯ್ ದೇವರಕೊಂಡ ಕೂಡ ತಮ್ಮ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗಿದೆ.
ವಿಜಯ್ ದೇವರಕೊಂಡ ಅಭಿನಯದ ಮುಂದಿನ ‘ಲೈಗರ್’ ಚಿತ್ರದಲ್ಲಿ ನಟಿಸೋಕೆ ಬರೋಬರಿ 20 ಕೋಟಿ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದಾರಂತೆ. ಇನ್ನು, ‘ಲೈಗರ್’ ಚಿತ್ರದಲ್ಲಿ ವಿಜಯ್ ಕಿಕ್ ಬಾಕ್ಸರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಶ್ವದ ಖ್ಯಾತ ಬಾಕ್ಸಿಂಗ್ ಚಾಂಪಿಯನ್ ಮೈಕ್ ಟೈಸನ್ ಕೂಡ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ನಿರ್ದೇಶಕ ಪೂರಿ ಜಗನ್ನಾಥ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರಕ್ಕೆ, ಕರಣ್ ಜೋಹರ್ ಧರ್ಮಾ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದೆ. ಪುರಿ ಕನೆಕ್ಟ್ಸ್ ಹಾಗೂ ನಟಿ ಚಾರ್ಮಿ ಜಂಟಿಯಾಗಿ ಹಣ ಹೂಡಿದ್ದಾರೆ. ನಟಿ ಅನನ್ಯಾ ಪಾಂಡೆ, ರಮ್ಯಾ ಕೃಷ್ಣನ್, ಮಕರಂದ್ ದೇಶಪಾಂಡೆ ಮತ್ತು ರೋನಿತ್ ರಾಯ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಇದನ್ನೂ ಓದಿ: ಸಾಯಿ ಪಲ್ಲವಿ ಸಿನಿಮಾ ಬಿಟ್ಟು ಬೇರೆ ಚಿತ್ರ ಮಾಡ್ತಿರೋದ್ಯಾಕೆ ‘ನಾತಿಚರಾಮಿ’ ಮಂಸೋರೆ..?
ಕನ್ನಡ, ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳು ಸೇರಿದಂತೆ ಒಟ್ಟು ಐದು ಭಾಷೆಗಳಲ್ಲಿ ಲೈಗರ್ ಚಿತ್ರ ಇದೇ ಆಗಸ್ಟ್ 25 ರಂದು ವಲ್ಡ್ವೈಡ್ ರಿಲೀಸ್ ಆಗಲಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post