ಭಾರತ ಕ್ರಿಕೆಟ್ ತಂಡದ ಆಲ್ರೌಂಡರ್ ಅಕ್ಷರ್ ಪಟೇಲ್ ತಮ್ಮ 28ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ತಮ್ಮ ಜನ್ಮದಿನದಂದೇ ಗೆಳತಿ ಮೇಹಾ ಅವರಿಗೆ ಪ್ರಪೋಸ್ ಮಾಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ಬಗ್ಗೆ ಸ್ವತಃ ಅಕ್ಷರ್ ಪಟೇಲ್ ಅವರೇ ಖಚಿತಪಡಿಸಿದ್ದು, ತಮ್ಮ ಇನ್ ಸ್ಟಾಗ್ರಾಂನಲ್ಲಿ ಎಂಗೇಜ್ಮೆಂಟ್ ಫೋಟೋಗಳನ್ನು ಶೇರ್ ಮಾಡಿದ್ದಾರೆ.
ಇಂದಿನಿಂದ ನಮ್ಮ ಜೀವನದ ಹೊಸ ಅಧ್ಯಾಯ ಆರಂಭವಾಗಲಿದೆ ಎಂದು ತಮ್ಮ ಗೆಳತಿಗೆ ತಾವು ಮಂಡಿಯೂರಿ ಪ್ರಪೋಸ್ ಮಾಡಿದ ಪೋಟೋ ಹಂಚಿಕೊಂಡಿದ್ದಾರೆ ಆಲ್ರೌಂಡರ್. ಇಂದಿಗೂ-ಎಂದೆಂದಿಗೂ ನೀನೆ ನನ್ನ ಸಂಗಾತಿ ಎಂದು ಬರೆದುಕೊಂಡಿದ್ದಾರೆ.
ಸದ್ಯ ಇಂಜುರಿ ಕಾರಣ ಸೌತ್ ಆಫ್ರಿಕಾದ ಪ್ರವಾಸದಿಂದ ದೂರ ಇರೋ ಅಕ್ಷರ್ ಪಟೇಲ್, ಮುಂದಿನ ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲೂ ಆಡೋದು ಡೌಟ್. ಎಡಗೈ ಸ್ಪಿನ್ನರ್ ಅಕ್ಷರ್ ಈ ಹಿಂದೆ ನಡೆದ ಇಂಗ್ಲೆಂಡ್ ವಿರುದ್ಧ ಆಡಿದ ಚೊಚ್ಚಲ ಸರಣಿಯಲ್ಲಿ 3 ಟೆಸ್ಟ್ಗಳಲ್ಲಿ 27 ವಿಕೆಟ್ಗಳನ್ನ ಪಡೆದ ಸಾಧನೆ ಮಾಡಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post