ಐಪಿಎಲ್ ಮೆಗಾ ಹರಾಜಿಗೆ ವೇದಿಕೆ ಸಿದ್ಧವಾಗಿದೆ. ಹರಾಜಿಗೂ ಮುನ್ನವೇ ಆರ್ಸಿಬಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಉಳಿಸಿಕೊಂಡಿದೆ. ಕಳೆದ ಸೀಸನ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಹರ್ಷಲ್ ಪಟೇಲ್ ಅವರನ್ನು ಆರ್ಸಿಬಿ ರಿಲೀಸ್ ಮಾಡಿದೆ.
ಈಗ ಹರ್ಷಲ್ ಪಟೇಲ್ 2 ಕೋಟಿ ಮೂಲ ಬೆಲೆಯೊಂದಿಗೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದಾರೆ. ಹರ್ಷಲ್ ಪಟೇಲ್ಗೆ ಯಾವ ತಂಡ ಮಣೆ ಹಾಕಲಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಹರ್ಷಲ್ ಮಾತಾಡಿದ್ದು, ತಾನು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
ನಾನು ಮುಂದಿನ ಸೀಸನ್ನಲ್ಲಿ ಸಿಎಸ್ಕೆ ಪರ ಆಡಲು ಬಯಸುತ್ತೇನೆ. ಎಂಎಸ್ ಧೋನಿ ನಾಯಕತ್ವದಡಿ ಆಡೋದು ನನ್ನಾಸೆ ಎಂದಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post