ರವಿ ಶಾಸ್ತ್ರಿ ಭಾರತದ ತಂಡದ ಮುಖ್ಯ ಕೋಚ್ ಸ್ಥಾನದಿಂದ ಕೆಳಗಿಳಿದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ ಎಲ್ಲಾ ಮೂರು ಮಾದರಿಯ ನಾಯಕತ್ವಕ್ಕೂ ರಾಜೀನಾಮೆ ನೀಡಿದರು. ಈ ಇಬ್ಬರ ಸ್ಥಾನಕ್ಕೆ ದ್ರಾವಿಡ್ ಮತ್ತು ರೋಹಿತ್ ಬಂದಿದ್ದಾರೆ. ಹೀಗಾಗಿ ಟೀಂ ಇಂಡಿಯಾದಲ್ಲಿ ರಾಹುಲ್ ದ್ರಾವಿಡ್ ಮತ್ತು ರೋಹಿತ್ ಶರ್ಮಾ ಹೊಸ ಯುಗ ಶುರುವಾಗಿದೆ.
ಈ ಸಂಬಂಧ ಮಾತಾಡಿರೋ ಸಚಿನ್ ತೆಂಡುಲ್ಕರ್, ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ಅದ್ಭುತ ಜೋಡಿ ಎಂದಿದ್ದಾರೆ. ಈ ಇಬ್ಬರೂ ದಿ ಬೆಸ್ಟ್ ಪರ್ಫಾಮೆನ್ಸ್ ನೀಡುತ್ತಾರೆ. ತಮ್ಮ ಸಾಮರ್ಥ್ಯಕ್ಕೂ ಮೀರಿ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದರು.
ಸೋಲು ನಮ್ಮನ್ನು ಕಾಡುವಾಗ ಜೊತೆಯಾಗಿ ಸಾಗುವುದು ಬಹಳ ಮುಖ್ಯ. ಹೀಗಾಗಿ ನನ್ನ ಪ್ರಕಾರ ರೋಹಿತ್ ಶರ್ಮಾ ಹಾಗೂ ರಾಹುಲ್ ದ್ರಾವಿಡ್ ಜೋಡಿ ಮುಂದಿನ ದಿನಗಳಲ್ಲಿ ಉತ್ತಮ ಪಲಿತಾಂಶ ನೀಡಲಿದೆ ಎಂದು ಹೇಳಿದರು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post