ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಇಂಡೀಸ್ ಭಾರತದ ಬೌಲರ್ಸ್ ದಾಳಿಗೆ ತತ್ತರಿಸಿ ಹೋಗಿತ್ತು. ಹೀಗಾಗಿ ಕೇವಲ 177 ರನ್ಗೆ ಆಲ್ ಔಟ್ ಆಗಬೇಕಾಯ್ತು.
1000ನೇ ಏಕದಿನ ಪಂದ್ಯದಲ್ಲಿ ಭಾರತದ ಉತ್ತಮ ಬೌಲಿಂಗ್ ಇಂಡಿಸ್ ಆಟಗಾರರ ದಾಳಿ ಮಾಡಿತ್ತು. ಅದರಲ್ಲೂ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಮಧ್ಯಮ ಕ್ರಮಾಂಕವನ್ನು ಸಂಪೂರ್ಣ ಕೆಡವಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು, ಈ ಮ್ಯಾಚ್ನಲ್ಲಿ ಯುಜುವೇಂದ್ರ ಚಾಹಲ್ ಹೊಸ ದಾಖಲೆ ಬರೆದಿದ್ದಾರೆ. ಚಾಹಲ್ ಏಕದಿನ ಕ್ರಿಕೆಟ್ ಮಾದರಿಯಲ್ಲಿ 100ನೇ ವಿಕೆಟ್ ಸಂಪಾದಿಸಿದ್ದಾರೆ. ಈ ಮೂಲಕ ಚಾಹಲ್ ಏಕದಿನ ಕ್ರಿಕೆಟ್ ಮಾದರಿಯಲ್ಲಿ ವೇಗವಾಗಿ 100 ವಿಕೆಟ್ ತೆಗೆದ ಭಾರತದ 5ನೇ ಬೌಲರ್ ಎನಿಸಿದರು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post