ವಿಧಾನಸಭೆ ಕಲಾಪ ನಾಳೆಗೆ ಮುಂದೂಡಿಕೆಯಾದ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದರು. ಸಚಿವ ಕೆ.ಎಸ್ ಈಶ್ವರಪ್ಪ ಹಿರಿಯ ರಾಜಕಾರಣಿ, ರಾಷ್ಟ್ರಧ್ವಜಕ್ಕೆ ಅವಮಾನ ಮಾಡೋದು ಅಕ್ಷಮ್ಯ ಅಪರಾಧ. 100 ವರ್ಷವಾಗಲೀ, 200 ವರ್ಷವಾಗಲೀ ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜದ ಬದಲಿಗೆ ಕೇಸರಿ ಧ್ವಜ ಹಾರಿಸುತ್ತೇವೆ ಎಂದಿದ್ದಾರೆ ಈಶ್ವರಪ್ಪ. ಇದು ಖಂಡನೀಯ ಎಂದು ಹೇಳಿದರು.
ಕೆ.ಎಸ್ ಈಶ್ವರಪ್ಪ ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಬದಲಿಗೆ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿದ್ದಾರೆ. ಇದರ ಬಗ್ಗೆ ಬಿಜೆಪಿ ಯಾವ ನಾಯಕರು ಮಾತಾಡಲಿಲ್ಲ. ನಾವು ಈ ಬಗ್ಗೆ ವಿಧಾನಸಭೆ ಪ್ರಸ್ತಾಪ ಮಾಡಿದ್ದೇವೆ. ಆದರೆ, ಸಚಿವ ಮಾಧುಸ್ವಾಮಿ ಈಶ್ವರಪ್ಪ ಅವರನ್ನು ಸಮರ್ಥಸಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
ಇನ್ನು, ಸದನದಲ್ಲೇ ಡಿ.ಕೆ ಶಿವಕುಮಾರ್ ತಂದೆ ಬಗ್ಗೆ ಏಕವಚನದಲ್ಲಿ ಮಾತಾಡಿದರು ಈಶ್ವರಪ್ಪ. ನಾನು ಇದನ್ನು ಖಂಡಿಸುತ್ತೇನೆ. ಯಾರೇ ಆಗಲಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದರೆ, ಸಂವಿಧಾನಕ್ಕೆ ಅಗೌರವ ತೋರಿದರೆ, ರಾಷ್ಟ್ರಗೀತೆಗೆ ಅಪಮಾನ ಮಾಡಿದರೆ ಸೆಡಿಷನ್ ಕೇಸ್ ಹಾಕಬೇಕು. ಈಗ ಈಶ್ವರಪ್ಪನ ಮೇಲೆ ದೇಶದ್ರೋಹದ ಕೇಸ್ ಹಾಕಿ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post