ವಿಜಯಪುರ: ಕೃಷ್ಣಾ ನದಿಗೆ ಜಿಗಿದು ಅರಣ್ಯಾಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಕೃಷ್ಣಾ ನದಿಯಲ್ಲಿ ನಡೆದಿದೆ. ಕೊಲ್ಹಾರ ಸೇತುವೆಯ ಮೇಲಿಂದ ಹಾರಿ ಅರಣ್ಯ ಇಲಾಖೆ ಸಿಬ್ಬಂದಿ ಈರಪ್ಪ ದುಂಡಪ್ಪ ದಟ್ಟಿ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಮಾರು 8 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ನಿವಾಸಿ ಈರಪ್ಪ ದುಂಡಪ್ಪ ದಟ್ಟಿ ಗುರುವಾರ ಮಧ್ಯಾಹ್ನ ಕೃಷ್ಣಾ ನದಿ ಸೇತುವೆ ಮೇಲೆ ತನ್ನ ಬೈಕ್ ನಿಲ್ಲಿಸಿದ್ದಾನೆ. ಬಳಿಕ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮೃತ ದೇಹಕ್ಕಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಬೋಟ್ ಮೂಲಕ ಹುಡುಕಾಟ ನಡೆಸಿದರು. ಬಳಿಕ ನದಿಯ ದಡದಲ್ಲಿ ದುಂಡಪ್ಪ ದಟ್ಟಿ ಶವ ಪತ್ತೆಯಾಗಿದೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post