ಕಿರುತೆರೆ ನಟಿ, ನಿರೂಪಕಿ ಅನುಪಮಾ ಗೌಡ ಮಾದರಿಯ ಕೆಲಸ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ. ವರ್ಷಗಳಿಂದ ಬೆಳೆಸಿದ್ದ ತಲೆಗೂದಲನ್ನು ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡುವ ಮೂಲಕ ಅವರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ‘ನನ್ನ ವೃತ್ತಿ ಜೀವನದಲ್ಲಿ ಉದ್ದನೆಯ ಜಡೆ ನನ್ನ ಆತ್ಮವಿಶ್ವಾಸದ ಕುರುಹು ಆಗಿತ್ತು. ಈ ತಲೆಗೂದಲನ್ನು ಪ್ರೀತಿಯಿಂದ ಪೋಷಣೆ ಮಾಡುತ್ತಾ ಬಂದಿದ್ದೆ.
ಇದೀಗ ಅನೇಕರಿಗೆ ಈ ತಲೆಗೂದಲಿನ ಅವಶ್ಯಕತೆ ಇರುವುದು ಕಂಡು ಬಂತು. ಹಾಗಾಗಿ ನಾನು ಅವುಗಳನ್ನು ಕತ್ತರಿಸಿ, ಅಗತ್ಯವಿದ್ದರಿಗೆ ಕೊಡಲು ಮುಂದಾಗಿದ್ದೇನೆ. ಈ ಕೆಲಸ ಮಾಡಲು ನನಗೆ ಹೆಮ್ಮೆ ಅನಿಸುತ್ತಿದೆ’ ಎಂದು ಅವರು ಪೋಸ್ಟ್ ಮಾಡಿದ್ದಾರೆ. ತಾವು ತಲೆಗೂದಲನ್ನು ಕಟ್ ಮಾಡಿಸಿದ್ದರ ಫೋಟೋವನ್ನೂ ಕೂಡ ಇನ್ಸ್ಟಾಗ್ರಾಂ ನಲ್ಲಿ ಹಾಗೂ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದು, ಇದೊಂದು ಚಿಕ್ಕ ಕೆಲಸವಾದರೂ, ತಲೆಗೂದಲು ಅವಶ್ಯವಿದ್ದವರ ಮುಖದಲ್ಲಿ ನಗು ನೋಡಿದಾಗ ಒಂದು ರೀತಿ ಸಾರ್ಥಕ ಭಾವ ಮೂಡುತ್ತದೆ ಎಂದೂ ಅವರು ಬರೆದುಕೊಂಡಿದ್ದಾರೆ.
ತಾವು ಇಂಥದ್ದೊಂದು ಪೋಸ್ಟ್ ಹಾಕುತ್ತಿರುವುದು ಕೇವಲ ಬೇರೆಯವರಿಗೂ ಪ್ರೇರಣೆ ಆಗಲಿ ಎನ್ನುವ ಕಾರಣಕ್ಕಾಗಿಯೇ ಹೊರತು, ಯಾವುದೇ ಪ್ರಚಾರಕ್ಕಾಗಿ ಅಲ್ಲ’ ಎನ್ನುವುದನ್ನು ಅವರು ಸ್ಪಷ್ಟ ಪಡಿಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post