ಲಖನೌ: ಎರಡನೇ ಅವಧಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿರುವ ಯೋಗಿ ಆದಿತ್ಯನಾಥ್ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ತಮ್ಮ ಸಂಪುಟದ ಸಚಿವರು ಸೇರಿದಂತೆ ಅವರ ಕುಟುಂಬ ಸದಸ್ಯರು ಹಾಗೂ ಎಐಎಸ್, ಎಪಿಎಸ್ ಅಧಿಕಾರಿಗಳು ತಮ್ಮ ಆಸ್ತಿಯ ವಿವರಗಳನ್ನು ಮುಂದಿನ ಮೂರು ತಿಂಗಳೊಳಗೆ ಘೋಷಣೆ ಮಾಡಬೇಕು. ಈ ವಿವರಗಳು ಆನ್ಲೈನ್ನಲ್ಲಿ ಎಲ್ಲರಿಗೂ ಲಭ್ಯವಿರಬೇಕು ಎಂದು ಆದೇಶ ನೀಡಿದ್ದಾರೆ.
ಎರಡನೇ ಅವಧಿಗೆ ಸಿಎಂ ಆದ ಯೋಗಿ ಆದಿತ್ಯನಾಥ್ ಸಚಿವ ಸಂಪುಟದಲ್ಲಿ ಹೊಸದಾಗಿ ಸೇರ್ಪಡೆಯಾಗಿರುವ ಸಚಿವರು ಹಾಗೂ ಸರ್ಕಾರಿ ಅಧಿಕಾರಿಗಳು ಪ್ರಮಾಣವಚನ ಸ್ವೀಕಾರ ಮಾಡಿದ ಮೂರು ತಿಂಗಳೊಳಗೆ ತಮ್ಮ ಆಸ್ತಿ ಘೋಷಣೆ ಮಾಡಬೇಕು ಎಂದು ಸೂಚಿಸಿದ್ದಾರೆ. ಸಚಿವರೊಂದಿಗೆ ಇಂದು ನಡೆದ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಾರ್ವಜನಿಕವಾಗಿ ಘೋಷಣೆ ಮಾಡಬೇಕು ಎಂದು ಸಿಎಂ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ. ಸರ್ಕಾರದ ಕೆಲಸದಲ್ಲಿ ಕುಟುಂಬದ ಸದಸ್ಯರ ಹಸ್ತಕ್ಷೇಪ ಆಗದಂತೆ ಎಲ್ಲ ಸಚಿವರು ನಿಗಾವಹಿಸಬೇಕು, ನಮ್ಮ ನಡತೆಯಿಂದ ನಾವು ಮಾದರಿಯಾಗಬೇಕು ಎಂದು ಹೇಳಿದ್ದಾರೆ. ಈ ವಿವರಗಳನ್ನು ಸಾರ್ವಜನಿಕರ ಆನ್‌ಲೈನ್ ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ಮಾಡಬೇಕು ಎಂದು ತಿಳಿಸಿದ್ದಾರೆ.
सभी लोक सेवक (IAS/PCS) अपनी व परिवार के सदस्यों की समस्त चल/अचल संपत्ति की सार्वजनिक घोषणा करें।
यह विवरण आमजनता के अवलोकनार्थ ऑनलाइन पोर्टल पर उपलब्ध कराया जाए: #UPCM श्री @myogiadityanath जी pic.twitter.com/N9Qk9RblZW
— CM Office, GoUP (@CMOfficeUP) April 26, 2022
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post