ಕೊಪ್ಪಳ: ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದು ಹೋಗಿದೆ. ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ದಾರುಣ ಘಟನೆ ಕನಕಗಿರಿ ತಾಲೂಕು ಹುಲಿಹೈದರ ಗ್ರಾಮದಲ್ಲಿ ನಡೆದಿದೆ.
ಘಟನೆ ಹೇಗೆ ಆಯ್ತು..?
ತಾಯಿ ಶೈಲಮ್ಮ(28) ಮಕ್ಕಳಾದ ಪವನ್ (2) ಸಾನ್ವಿ (3) ಮೃತ ದುರ್ದೈವಿಗಳು. ಮನೆ ಮುಂದೆ ಬಟ್ಟೆ ಒಣಗಲು ಹೋದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿದೆ. ಪರಿಣಾಮ ಇಬ್ಬರು ಮಕ್ಕಳು ಸೇರಿ ತಾಯಿಯೂ ಕೂಡ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.
ಮೂವರನ್ನ ಕಳೆದುಕೊಂಡ ಕುಟುಂಬ ಕಂಗಾಲಾಗಿದೆ. ಅಲ್ಲದೇ ಗ್ರಾಮಸ್ಥರು ವಿದ್ಯುತ್ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರಂತ ಸಂಭವಿಸಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post