ಬಳ್ಳಾರಿ: ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ವಿಮ್ಸ್ ಹಾಸ್ಟೆಲ್ನಲ್ಲಿ ನಡೆದಿದೆ. ಶ್ರೇಯಸ್ ಜೋಶಿ (25) ಸಾವಿಗೆ ಶರಣಾದ ವಿದ್ಯಾರ್ಥಿ.
ಶುಕ್ರವಾರ ಸಂಜೆ ಹಾಸ್ಟೆಲ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೂಡಲೇ ಸ್ನೇಹಿತರು ಸೇರಿ ಶ್ರೇಯಸ್‌ನನ್ನ ವಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ 6.30ಕ್ಕೆ ಸಾವನ್ನಪ್ಪಿದ್ದಾನೆ. ಇತ್ತೀಚೆಗೆ ಶ್ರೇಯಸ್ ಎಂಬಿಬಿಎಸ್ ಫೈನಲ್ ಇಯರ್ ಪಾಸಾಗಿದ್ದ ಎಂದು ತಿಳಿದುಬಂದಿದೆ. ಶ್ರೇಯಸ್ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ರಾಜೇಶ್ವರ ಗ್ರಾಮದವನು ಎನ್ನಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post