ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ಬಿಜೆಪಿ ಯುವ ಮೋರ್ಚಾ ಸಮಾವೇಶದಲ್ಲಿ ನಾನು ಭಾಗವಹಿಸುತ್ತಿಲ್ಲ ಅಂತ ಭಾರತ ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಸ್ಪಷ್ಟಪಡಿಸಿದ್ದಾರೆ.
ಇದೇ ತಿಂಗಳು 12 ನೇ ತಾರೀಖಿನಿಂದ 15ನೇ ತಾರೀಖಿನ ತನಕ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಯುವ ಮೋರ್ಚಾದ ಬೃಹತ್ ಸಮಾವೇಶ ನಡೆಯಲಿದೆ. ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಯುವಕರನ್ನು ಪಕ್ಷಕ್ಕೆ ಆಕರ್ಷಿಸಲು ಮುಂದಾಗಿರೋ ಬಿಜೆಪಿ, ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ರಾಹುಲ್ ದ್ರಾವಿಡ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ಥಳೀಯ ಶಾಸಕರು ಮಾಹಿತಿ ನೀಡಿದ್ದರು.
ಧರ್ಮಶಾಲಾ ಶಾಸಕರೂ ಆಗಿರುವ ಬಿಜೆಪಿ ನಾಯಕ ವಿಶಾಲ್ ನೆಹರಿಯಾ, ಈ ಕಾರ್ಯಕಾರಿಣಿಗೆ ಕ್ರಿಕೆಟ್ ದಂತಕಥೆ ಹಾಗೂ ಟೀಂ ಇಂಡಿಯಾ ಹೆಡ್ ಕೋಚ್ ಕೂಡ ಆಗಿರುವ ರಾಹುಲ್ ದ್ರಾವಿಡ್ ಅವರೂ ಬರಲಿದ್ದಾರೆ ಎಂದು ಹೇಳಿದ್ದರು. ಅವರ ಹೇಳಿಯನ್ನು ಸದ್ಯ ರಾಹುಲ್ ದ್ರಾವಿಡ್ ಅಲ್ಲಗಳೆದಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post