ಕೊಲಂಬೋ: ಶ್ರೀಲಂಕಾ ಎದುರಿಸುತ್ತಿರೋ ಆರ್ಥಿಕ ಬಿಕ್ಕಟ್ಟು ಇನ್ನೂ ಸುಧಾರಿಸಿಲ್ಲ. ಹೀಗಾಗಿ ರೊಚ್ಚಿಗೆದ್ದ ಜನಸಾಮಾನ್ಯರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ರಾತ್ರೋರಾತ್ರಿ ಕೊಲಂಬೋದಲ್ಲಿರೋ ಪ್ರಧಾನಿ ಅಧಿಕೃತ ನಿವಾಸದ ಮುಂದೆ ಸಾವಿರಾರು ಮಂದಿ ಜಮಾಯಿಸಿದ್ದಾರೆ. ಅಲ್ಲದೇ ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಿಗೆ ಯತ್ನಿಸಿದ್ದಾರೆ. ಈ ನಡುವೆ ಲಂಕಾದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಮತ್ತವರ ಕುಟುಂಬ ಟ್ರಿಂಕೋಮಲೀ ಎಂಬ ನೌಕಾ ನೆಲೆಯಲ್ಲಿ ಆಶ್ರಯ ಪಡೆದಿದೆ ಎನ್ನಲಾಗಿದೆ.
ಹೌದು, ಕಳೆದ ಎರಡು ತಿಂಗಳಿಂದ ನಡೆಯುತ್ತಿರೋ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹೀಗಾಗಿ ಮಹಿಂದಾ ರಾಜಪಕ್ಸ ಜೀವ ಭಯದಿಂದ ನೌಕಾ ನೆಲೆಯೊಂದರಲ್ಲಿ ಅಡಗಿ ಕುಳಿತಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೊಂದೆಡೆ ಪ್ರತಿಭಟನೆ ತೀವ್ರಗೊಂಡಿದೆ. ರಾಜಪಕ್ಸ ಅಡಗಿರೋ ನೌಕಾ ನೆಲೆಗೂ ಜನ ನುಗ್ಗಲು ಪ್ರಯತ್ನಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಹಿಮ್ಮೆಟ್ಟಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post