ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಉಸ್ತುವಾರಿ ಜವಾಬ್ದಾರಿ ಬಿಟ್ಟ ಬಳಿಕ ನನ್ನ ವಿರುದ್ಧ 8 ಕೋಟಿ ರೂಪಾಯಿ ವಂಚನೆ ಆರೋಪ ಕೇಳಿ ಬಂದಿದೆ ಎಂದು ನಟಿ ರಮ್ಯಾ ಟ್ವೀಟ್ ಮಾಡಿದ್ದಾರೆ. ಈ ಆರೋಪ ನನ್ನ ಇಮೇಜ್ ಡ್ಯಾಮೇಜ್ ಮಾಡಲು ಎಂದು ಟಿವಿ ಚಾನೆಲ್ಗಳಲ್ಲಿ ಸುದ್ದಿ ಮಾಡಲಾಗುತ್ತಿದೆ. ನಾನು 8 ಕೋಟಿ ರೂಪಾಯಿ ವಂಚಿಸಿಲ್ಲ, ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡಿದ್ದೇನೆ ಎಂದು ರಮ್ಯಾ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಕಚೇರಿಯೇ ನನ್ನ ಟ್ರೋಲ್ ಮಾಡೋಕೆ ತಿಳಿಸಿದೆ. ಕರ್ನಾಟಕ ಕಾಂಗ್ರೆಸ್ ಅಂದ್ರೆ ಡಿ.ಕೆ ಶಿವಕುಮಾರ್, ಡಿ.ಕೆ ಶಿವಕುಮಾರ್ ಅಂದ್ರೆ ಕರ್ನಾಟಕ ಕಾಂಗ್ರೆಸ್. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸ್ಪಷ್ಟನೆ ನೀಡಲಿ. ಆಗಾದ್ರೂ ನನ್ನ ವಿರುದ್ಧ ಟ್ರೋಲ್ ನಿಲ್ಲಬಹುದು ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
Office = @INCKarnataka under the leadership of the honourable KPCC president @DKShivakumar
— Divya Spandana/Ramya (@divyaspandana) May 12, 2022
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post