ದಕ್ಷಿಣ ದೆಹಲಿಯ ಮುಂಡ್ಕಾ ಮೆಟ್ರೋ ಸ್ಟೇಷನ್ ಬಳಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 26 ಮಂದಿ ಸಾವನ್ನಪ್ಪಿ, 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ರೈಲ್ವೇ ನಿಲ್ದಾಣದ ಬಳಿಯಿರುವ ಕಮರ್ಷಿಯಲ್ ಬಿಲ್ಡಿಂಗ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬಿಲ್ಡಿಂಗ್ ಮೂರು ಅಂತಸ್ತುಗಳನ್ನ ಹೊಂದಿದೆ. ಈಗಾಗಲೇ ರಕ್ಷಣಾ ಸಿಬ್ಬಂದಿ 60 ರಿಂದ 70 ಮಂದಿಯನ್ನ ರಕ್ಷಣೆ ಮಾಡಿದ್ದಾರೆ. ಅವರಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಹೀಗಾಗಿ ಸಾವು ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.
ಇನ್ನು ಬೆಂಕಿ ಕಾಣಿಸಿಕೊಳ್ತಿದ್ದಂತೆ ಕಟ್ಟಡದ ಮೇಲಿನಿಂದ ಹಲವಾರು ಮಂದಿ ಹಾರಿದ್ದಾರೆ. ಇದರಿಂದ ಅನೇಕ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: BIG BREAKING ದೆಹಲಿಯಲ್ಲಿ ಭೀಕರ ಅಗ್ನಿ ದುರಂತ; 16 ಮಂದಿ ಸಜೀವ ದಹನ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post