ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ ಎರಚಿ ಎಸ್ಕೇಪ್ ಆಗಿದ್ದ ಪಾಪಿ ನಾಗೇಶ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ತಮಿಳುನಾಡಿನ ಆಶ್ರಮವೊಂದರಲ್ಲಿ ಆ್ಯಸಿಡ್ ನಾಗೇಶ್ ಸೆರೆಯಾಗಿದ್ದಾನೆ. ಇತ್ತ ತಮಿಳುನಾಡಿನಿಂದ ಬೆಂಗಳೂರಿಗೆ ಕರೆ ತರುವ ವೇಳೆ ಎಸ್ಕೇಪ್ ಆಗಲು ಯತ್ನಿಸಿದ್ದ ಆರೋಪಿ ನಾಗೇಶ್ ಕಾಲಿಗೆ ಪೊಲೀಸರು ಗುಂಡಿಟ್ಟಿದ್ದಾರೆ.
ತಮಿಳುನಾಡಿನಿಂದ ಆರೋಪಿಯನ್ನು ಬೆಂಗಳೂರಿಗೆ ಕರೆತರುವ ಸಂದರ್ಭದಲ್ಲಿ ಆರೋಪಿ ಕೆಂಗೇರಿಯ ಮೇಲ್ಸೇತುವೆ ಬಳಿ ಮೂತ್ರ ವಿಸರ್ಜನೆಗೆ ಗಾಡಿ ನಿಲ್ಲಿಸುವಂತೆ ಮನವಿ ಮಾಡಿದ್ದ. ಇದರಂತೆ ವಾಹನ ನಿಲ್ಲಿಸುತ್ತಿದ್ದಂತೆ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದನಂತೆ. ಅಲ್ಲದೇ ಹಿಡಿಯಲು ಹೋದ ಪೇದೆ ಮೇಲೆ ಹಲ್ಲೆಗೆ ಯತ್ನಿಸಿದ್ದು, ಈ ವೇಳೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಆರೋಪಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿರುವ ಪೊಲೀಸರು ಚಿಕಿತ್ಸೆ ಕೊಡಿಸಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡಿದ್ದ ಕಾನ್ಸ್ಟೇಬಲ್ ಮಹಾದೇವಯ್ಯ ಅವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಸದ್ಯ ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರು ಆರೋಪಿಯನ್ನು ನಾಗೇಶನನ್ನ ನಗರಕ್ಕೆ ಕರೆತಂದಿದ್ದು, ಆತ ಕೃತ್ಯ ಎಸಗಲು ಅಸಲಿ ಕಾರಣವೇನು. ಬಳಿಕ ಊರು ಬಿಟ್ಟಿದ್ದೇಗೆ? ಆಶ್ರಮ ಸೇರಿದ್ಯಾಕೆ ಎಂಬ ಬಗ್ಗೆ ಪೊಲೀಸರು ವಿಚಾರಣೆ ಮಾಡಲಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post