ತಮಿಳು ಖ್ಯಾತ ನಟ ಕಮಲ್ ಹಾಸನ್ ಅವರ ಹೊಸ ಸಿನಿಮಾ ಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂಬ ಸುದ್ದಿ ತಿಳಿದರೆ ಸಾಕು ಅಭಿಮಾನಿಗಳು ಎಂತಹ ದೊಡ್ಡ ಸಾಲಿನಲ್ಲಿ ನಿಂತಾದರೂ ಟಿಕೆಟ್ ಪಡೆದುಕೊಂಡು ನೋಡುತ್ತಾರೆ. ಇವರ ಮುಂಬರುವ ಚಿತ್ರವಾದ ‘ವಿಕ್ರಮ್’ನ ಬಿಡುಗಡೆಗಾಗಿ ಇವರ ಅಭಿಮಾನಿಗಳು ಕಾತುರತೆಯಿಂದ ಕಾಯುತ್ತಿದ್ದಾರೆ . ತಮ್ಮ ಹಳೆಯ ಕ್ರೇಜ್ನ ಇನ್ನೂ ಉಳಿಸಿಕೊಂಡು ಬಂದ ನಟರಲ್ಲಿ ಕಮಲ್ ಹಾಸನ್ ಕೂಡ ಒಬ್ಬರು.
ಇದೀಗ ವಿಕ್ರಮ್ ಸಿನಿಮಾ ಯಾವಾಗ ರಿಲೀಸ್ ಎಂದು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ ಇದೀಗ ಕಮಲ್ ಹಾಸನ್ ವಿರುದ್ಧ ದೂರು ದಾಖಲಾಗಿದೆ. ಕೇಂದ್ರ ಸರ್ಕಾರವನ್ನು ಅಣಕ ಮಾಡಲಾಗಿದೆ ಎನ್ನುವ ಕಾರಣಕ್ಕೆ ದೂರು ನೀಡಲಾಗಿದೆ. ಕಮಲ್ ಹಾಸನ್ ನಟನೆಯ ವಿಕ್ರಮ್ ಸಿನಿಮಾದ ಹಾಡು ಇತ್ತೀಚಿಗಷ್ಟೆ ಬಿಡುಗಡೆಯಾಗಿತ್ತು. ‘ಪಾತಾಳ ಪಾತಾಳ..’ ಎನ್ನುವ ಸಾಹಿತ್ಯವಿರುವ ಹಾಡಿನಲ್ಲಿ ಕೇಂದ್ರ ಸರ್ಕಾರವನ್ನು ಅಣಕ ಮಾಡಲಾಗಿದೆ ಎಂದು ದೂರು ದಾಖಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post