ಬೆಂಗಳೂರು: ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನ ನೀಡಿದೆ.
ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳದಲ್ಲಿ ಕೂಡ ವ್ಯಾಪಕ ಮಳೆ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮೇ ತಿಂಗಳಲ್ಲಿ ಈ ವರ್ಷ ಕರ್ನಾಟಕದಲ್ಲಿ ಮೊದಲ ರೆಡ್ ಅಲರ್ಟ್ ಘೋಷಣೆಯಾಗಿದೆ.
ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಪ್ರಮಾಣದಲ್ಲಿ ಬೀಳುವ ಸಾಧ್ಯತೆ ಇದೆ. ಹೀಗಾಗಿ ಮೇ 19ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಮೇ 20 ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಇಂದು, ನಾಳೆ , ನಾಡಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post