ಧೋನಿ ಅಭಿಮಾನಿಗಳ ಪಾಲಿಗೆ ಸಿಹಿ ಸುದ್ದಿ ಸಿಕ್ಕಿದೆ. ಐಪಿಎಲ್ನಿಂದ ನಿವೃತ್ತಿ ಹೊಂದುತ್ತಾರೆ ಎಂಬ ವದಂತಿಗಳಿಗೆ MS ಧೋನಿ ತೆರೆ ಎಳೆದಿದ್ದಾರೆ. ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ಟಾಸ್ ವೇಳೆ ಮಾತನಾಡಿದ ಧೋನಿ, ನಿವೃತ್ತಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಮುಂದಿನ ಆವೃತ್ತಿಯ IPLನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವುದನ್ನ ಮುಂದುವರಿಸುವುದಾಗಿ ಧೋನಿ ಖಚಿತಪಡಿಸಿದ್ದಾರೆ. ಖಂಡಿತವಾಗಿಯೂ ನಾನು ಮುಂದಿನ ವರ್ಷ ಆಡುತ್ತೇನೆ. ನನ್ನ ಕೊನೇ ಮ್ಯಾಚ್ ಚೆನ್ನೈನಲ್ಲೇ ಎಂದು ಧೋನಿ ಹೇಳುವ ಮೂಲಕ ನಿವೃತ್ತಿ ವದಂತಿಗಳಿಗೆ ತೆರೆ ಎಳೆದಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post