ಆಂಧ್ರ ಪ್ರದೇಶದ ಕೋನಸೀಮಾ (Konaseema) ಜಿಲ್ಲೆಯ ಹೆಸರು ಬದಲಾವಣೆ ವಿರುದ್ಧ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ. ಇಂದು ಕೋನಸೀಮಾ ಸಾಧನಾ ಸಮಿತಿ ಆಂಧ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಕೈಗೊಂಡಿತ್ತು. ಈ ವೇಳೆ ಅಮಲಾಪುರಂನಲ್ಲಿ ಹಿಂಸಾಚಾರ ನಡೆದಿದ್ದು, ಒಂದು ಸಾವಾಗಿದೆ.
10ಕ್ಕೂ ಹೆಚ್ಚು ಮಂದಿಗೆ ಗಾಯ
ಈ ಹಿಂಸಾಚಾರದಲ್ಲಿ 10 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಆಂಧ್ರ ಸರ್ಕಾರ 144 ಸೆಕ್ಷನ್ ಜಾರಿ ಮಾಡಿತ್ತು. ಹೀಗಿದ್ದೂ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಹೀಗಾಗಿ ಪೊಲೀಸರು ಪ್ರತಿಭಟನಾಕಾರರ ನಡುವೆ ಗಲಾಟೆ ನಡೆದಿದೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಜಿಲ್ಲಾ ಎಸ್ಪಿ ಸುಬ್ಬಾರೆಡ್ಡಿ ವಾಹನದ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.
ದಾಳಿಯಲ್ಲಿ ಕೆಲವು ಪೊಲೀಸರು ಗಾಯಗೊಂಡಿದ್ದಾರೆ. ಅಲ್ಲದೇ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಪ್ರಹಾರ ಮಾಡಿದ್ದಾರೆ. ಅಲ್ಲದೇ ಹಿಂಸಾಚಾರ ಸಂಬಂಧ ಕೆಲವು ಪ್ರತಿಭಟನಾಕಾರರನ್ನ ಬಂಧಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಅಮಲಾಪುರಂನಲ್ಲಿ ನಡೆದ ಗಲಭೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆಂಧ್ರ ಸರ್ಕಾರ ಹೇಳಿದೆ. ಅಲ್ಲದೇ ಇದರ ಹಿಂದೆ ಟಿಡಿಪಿ ಮತ್ತು ಜನಸೇನಾ ಪಕ್ಷಗಳಿರುವ ಶಂಕೆ ಇದೆ ಎಂದು ಗೃಹ ಸಚಿವರು ಆರೋಪಿಸಿದ್ದಾರೆ. ಕೋನಸೀಮ ಜಿಲ್ಲೆಗೆ ಅಂಬೇಡ್ಕರ್ ಹೆಸರಿಡಲಾಗಿದೆ. ಅಂಬೇಡ್ಕರ್ ಹೆಸರನ್ನು ವಿರೋಧಿಸುವುದು ಸರಿಯಲ್ಲ. ಕೋಣಸೀಮೆಯ ಜನರ ಒತ್ತಾಯದ ಮೇರೆಗೆ ಅಂಬೇಡ್ಕರ್ ಹೆಸರನ್ನ ಇಡಲಾಗಿದೆ. ಕೋನಸೀಮ ಜಿಲ್ಲೆಯನ್ನು ಕಂದಾಯ ಇಲಾಖೆ ಡಾ.ಬಿ.ಆರ್.ಅಂಬೇಡ್ಕರ್ ಕೋನಸೀಮ ಎಂದು ಮರುನಾಮಕರಣ ಮಾಡಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post