ಲಖನೌ: ಉತ್ತರಪ್ರದೇಶದ ಬಹ್ರೈಚ್-ಲಖೀಂಪುರ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕರ್ನಾಟಕದ ಬೀದರ್ನ 7 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ.
ಕರ್ನಾಟಕದಿಂದ ಅಯೋಧ್ಯೆಗೆ 16 ಮಂದಿ ಬಸ್ನಲ್ಲಿ ತೆರಳಿದ್ದರು. ಈ ವೇಳೆ ಮೋತಿಪುರ್ ಪ್ರದೇಶದ ನಾನಿಹಾ ಮಾರ್ಕೆಟ್ ಬಳಿ ಬಸ್ಗೆ ಟ್ರಕ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್ ಚಾಲಕ ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. 9 ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನೆ ಸಂಬಂಧ ಸಂತಾಪ ಸೂಚಿಸಿರೋ ಯುಪಿ ಸಿಎಂ ಯೋಗಿ ಆದಿತ್ಯನಾಥ್, ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post