ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಚಂದ್ರು ಅವರು ರಾಜೀನಾಮೆ ಸಲ್ಲಿಕೆ ಮಾಡಿದ್ದು, ಈ ಕುರಿತಂತೆ ಪತ್ರ ರವಾನಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ವ್ಯಾಪಕ ನೆಲೆಯಲ್ಲಿ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆಯಾಗಿದ್ದೆ. ಅಂದಿನಿಂದಲೂ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿಯಿದೆ. ಸದ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ಪ್ರಾಮಾಣಿಕ ಸೇವೆ ಗುರುತಿಸಿದ ಬೇಸರ..
ಎಂಎಲ್ಸಿ ಅಥವಾ ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಹಿರಿಯ ಮುಖಂಡ ಚಂದ್ರು ಅವರನ್ನು ಪರಿಗಣಿಸದೇ ಇರೋದು ಹಾಗೂ ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ರೂ ಗುರುತಿಸಲಿಲ್ಲ ಎಂಬ ಬೇಸರದಿಂದ ಅವರು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ.
ರಂಗಭೂಮಿ,ಚಲನಚಿತ್ರ ನಟರು ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಂಸ್ಕೃತಿಕ ಘಟಕದ ಚೇರ್ಮನ್ ಆಗಿರುವ ಶ್ರೀ ಮುಖ್ಯಮಂತ್ರಿ ಚಂದ್ರು ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಭೇಟಿ ಮಾಡಿದರು. pic.twitter.com/GYjK17BMSR
— Saleem Ahmed (@SaleemAhmadINC) May 28, 2022
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post