ಚಿಕ್ಕೋಡಿ: ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗದೇ ಇರುವ ಕಾರಣಕ್ಕೆ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ಕರಗುಪ್ಪಿ-ಯಲ್ಲಾಪೂರ ಗ್ರಾಮದಲ್ಲಿ ನಡೆದಿದೆ. ರಮೇಶ್ ಬಾಳಪ್ಪ ಪಾಟೀಲ್ (25) ಮೃತ ದುರ್ದೈವಿ.
ಮದುವೆ ಆಗಲಿಲ್ಲ ಎಂದು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಇಬ್ಬರು ಸಹೋದರರು ಹಾಗೂ ಮೃತ ರಮೇಶಗೆ ಹಲವು ವರ್ಷಗಳಿಂದ ಕನ್ಯೆಯನ್ನು ಹುಡುಕುತ್ತಿದ್ದರು. ಇದೇ ಕಾರಣದಿಂದಾಗಿ ಬೇಸತ್ತು, ತಮ್ಮ ತೋಟದ ಮಾವಿನ ಮರಕ್ಕೆ ನೇಣು ಬಿಗಿದು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಯಮಕಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post