ಕಲಬುರಗಿ: ಕಮಲಾಪುರ ತಾಲೂಕಿನ ಹೊರವಲಯದಲ್ಲಿ ಭೀಕರ ಬಸ್ ದುರಂತ ಸಂಭವಿಸಿದ್ದು 7 ರಿಂದ 8 ಜನ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಬಗ್ಗೆ ನ್ಯೂಸ್ಫಸ್ಟ್ಗೆ ಎಸ್ಪಿ ಇಶಾ ಪಂತ್ ಮಾಹಿತಿ ನೀಡಿದ್ದಾರೆ. ಬೆಳಗ್ಗೆ 6.30ರ ಸುಮಾರಿಗೆ ಬಸ್ ದುರಂತ ನಡೆದಿದೆ. ಬೆಳಗ್ಗೆ 6.50ರ ಸುಮಾರಿಗೆ ನಮಗೆ ಮಾಹಿತಿ ಬಂತು. ಬಸ್ ದುರಂತದಲ್ಲಿ 7-8 ಜನ ಸಿಲುಕಿರುವ ಶಂಕೆ ಇದೆ. ಬಸ್ನ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. ಎಷ್ಟು ಜನ ಸಾವು ಅಂತ ನಿಖರವಾಗಿ ಹೇಳಲು ಆಗಲ್ಲ ಎಂದಿದ್ದಾರೆ.
ದುರ್ಘಟನೆಯಲ್ಲಿ 12 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬಸ್ ದುರಂತದಲ್ಲಿ 7-8 ಜನ ಸಿಲುಕಿರೋ ಶಂಕೆ ಇದೆ, 12 ಪ್ರಯಾಣಿಕರಿಗೆ ಗಾಯ -ಎಸ್ಪಿ ಇಶಾ ಪಂತ್
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post