ದೇಶದಲ್ಲಿ ಮತ್ತೆ ಕೊರೊನಾ ಆತಂಕ ಆರಂಭವಾಗಿದ್ದು ತಮಿಳುನಾಡು, ಕೇರಳ, ತೆಲಂಗಾಣ, ಮಹಾರಾಷ್ಟ್ರ, ಕರ್ನಾಟಕ ಸೇರಿ ಒಟ್ಟು 5 ರಾಜ್ಯಗಳಲ್ಲಿ ಕೋವಿಡ್ ಕೇಸ್ ಹೆಚ್ಚುತ್ತಿವೆ.
ಕೇಂದ್ರ ಸರ್ಕಾರ ಈ 5 ರಾಜ್ಯಗಳಿಗೆ ಕೋವಿಡ್ ಅಲರ್ಟ್ ಮಾಡಿದ್ದು, ಟೆಸ್ಟಿಂಗ್ ಸಂಖ್ಯೆ ಹೆಚ್ಚಳ ಹಾಗೂ ಜಿನೋಮಿಕ್ಸ್ ಸೀಕ್ವೆನ್ಸ್ ಬಗ್ಗೆ ನಿಗಾ ವಹಿಸುವಂತೆ ಸೂಚನೆ ನೀಡಿದೆ. ಅಷ್ಟೇ ಅಲ್ಲದೇ ಕ್ಲಸ್ಟರ್ಗಳ ಮೇಲೆ ತೀವ್ರ ನಿಗಾ ವಹಿಸಿ. ಸೋಂಕಿತರ ಜಿನೋಮಿಕ್ ಸೀಕ್ವೆನ್ಸ್ ಮಾದರಿಯನ್ನ ಕೇಂದ್ರಕ್ಕೆ ಕಳುಹಿಸುವಂತೆ ತಿಳಿಸಿದೆ.
ಕೇಂದ್ರ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ, ಕೇರಳದ 11 ಜಿಲ್ಲೆಗಳಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ತಮಿಳುನಾಡಿನಲ್ಲಿ ಎರಡು ಜಿಲ್ಲೆಗಳಲ್ಲಿ ಹಾಗೂ ಮಹಾರಾಷ್ಟ್ರದಲ್ಲಿ ಆರು ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ. ಹಾಗೆಯೇ ಕರ್ನಾಟದ ಬೆಂಗಳೂರು ಅರ್ಬನ್ನಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಳವಾಗಿದೆ ಎಂದು ತಿಳಿಸಿದೆ.
ಅಂದ್ಹಾಗೆ ನಿನ್ನೆ ರಾಜ್ಯದಲ್ಲಿ 259 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸಕ್ರೀಯ ಪ್ರಕರಣಗಳ ಸಂಖ್ಯೆ 2229ಕ್ಕೆ ಏರಿಕೆ ಆಗಿದೆ. ನಿನ್ನೆ ಒಂದೇ ದಿನ 234 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post